Davangere University Recruitment 2022: ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಲಭ್ಯವಿರುವ ಕಲ್ಯಾಣ ಕರ್ನಾಟಕ ವೃಂದದ ಹಾಗೂ ಸ್ಥಳೀಯ ವೃಂದದ ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ದಾವಣಗೆರೆ ವಿಶ್ವವಿದ್ಯಾನಿಲಯ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 10 |
ಅರ್ಜಿ ಸಲ್ಲಿಸುವ ಬಗೆ | ಆಫ್ ಲೈನ್ |
ಹುದ್ದೆಗಳ ವಿವರ |
ಸಹಾಯಕ ಕುಲಸಚಿವ 2 ಹುದ್ದೆಗಳು |
ಕಚೇರಿ ಅಧೀಕ್ಷಕ 2 ಹುದ್ದೆಗಳು |
ಪ್ರಥಮ ದರ್ಜೆ ಸಹಾಯಕ 6 ಹುದ್ದೆಗಳು |
ವಿದ್ಯಾರ್ಹತೆ:
ಹುದ್ದೆಗಳಿಗನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದು, ಈ ಕುರಿತ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಗಳ ಮೂಲಕ ಅಧಿಸೂಚನೆಯನ್ನು ಗಮನಿಸತಕ್ಕದ್ದು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು. ಹಾಗೂ ಗರಿಷ್ಠ ವಯೋಮಿತಿಯು
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿರುತ್ತದೆ.
ವೇತನಶ್ರೇಣಿ:
ಹುದ್ದೆಗಳ ಹೆಸರು | ವೇತನ ಶ್ರೇಣಿ |
ಸಹಾಯಕ ಕುಲಸಚಿವ | 52650- 97100 ರೂ ಮಾಸಿಕ |
ಕಚೇರಿ ಅಧೀಕ್ಷಕ | 43100-83900 ರೂ ಮಾಸಿಕ |
ಪ್ರಥಮ ದರ್ಜೆ ಸಹಾಯಕ | 30350-58250 ರೂ ಮಾಸಿಕ |
ಅರ್ಜಿ ಶುಲ್ಕ:
ವಿಕಲಚೇತನ ದೃಷ್ಟಿದೋಷವುಳ್ಳ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 500 ರೂ.
ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 1000 ರೂ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ :
ಕುಲಸಚಿವರು, ದಾವಣಗೆರೆ ವಿಶ್ವವಿದ್ಯಾಲಯ, ಶಿವಗಂಗೋತ್ರಿ, ದಾವಣಗೆರೆ-577007
- ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
- ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
- ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
- ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. ಅದರ ಮಾಹಿತಿ ಅಪ್ಲೋಡ್ ಮಾಡಿ
- ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 19 ಸೆಪ್ಟೆಂಬರ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 18 ಅಕ್ಟೋಬರ್ 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |