ಬಿಲ್ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿ ಅಹ್ವಾನ : Gram Panchayat Recruitment 2022

Bangalore Rural Gram Panchayat Recruitment 2022: ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿ
ಹುದ್ದೆಗಳ ಹೆಸರು:ಕರವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ (ಜವಾನ), ಕ್ಲೀನರ್ (ಸ್ವಚ್ಛತಾಗಾರ)
ಒಟ್ಟು ಹುದ್ದೆಗಳು ಒಟ್ಟು 65 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ವಿವರ 
ಕರವಸೂಲಿಗಾರರು 3
ಡಾಟಾ ಎಂಟ್ರಿ ಆಪರೇಟರ್ 3
ಅಟೆಂಡೆಂಟ್ 10
ಕ್ಲೀನರ್ 49

ವಿದ್ಯಾರ್ಹತೆ

  • ಕರವಸೂಲಿಗಾರರು  ಹುದ್ದೆಗಳಿಗೆ ಅಭ್ಯರ್ಥಿಗಳು – ಕನ್ನಡವನ್ನು ಒಂದು ವಿಷಯವನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
  • ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳು – ಕನ್ನಡವನ್ನು ಒಂದು ವಿಷಯವನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಆರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.
  • ಅಟೆಂಡೆಂಟ್ ಹಾಗೂ ಕ್ಲೀನರ್ ಹುದ್ದೆಗಳಿಗೆ ಅಭ್ಯರ್ಥಿಗಳು – ಕನ್ನಡವನ್ನು ಒಂದು ವಿಷಯವನ್ನಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಹಿಂ. ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಪ.ಜಾತಿ/ಪ.ಪಂ/ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 300
ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ. 200
ಪ‌.ಜಾತಿ, ಪ.ಪಂ. ಅಭ್ಯರ್ಥಿಗಳು ರೂ. 100
(ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ನಿಗಧಿತ ಶುಲ್ಕ ಪಾವತಿಸಬೇಕು.)

ಆಯ್ಕೆ ವಿಧಾನ:
ಕರವಸೂಲಿಗಾರರು, ಅಟೆಂಡೆಂಟ್, ಕ್ಲೀನರ್ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

  • ಮೊದಲನೆಯದಾಗಿ ಬೆಂಗಳೂರು ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
  • ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • ಬೆಂಗಳೂರು ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್, ಡೇಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್, ಕ್ಲೀನರ್ ಆನ್‌ಲೈನ್‌ನಲ್ಲಿ ಅನ್ವಯಿಸಿ – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಬೆಂಗಳೂರು ಗ್ರಾಮ ಪಂಚಾಯತ್ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
    ಬೆಂಗಳೂರು ಗ್ರಾಮ ಪಂಚಾಯತ್ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಸೆಪ್ಟೆಂಬರ್ 30, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 20, 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
error: Content is protected !!