KPSC RDWSD Recruitment 2022 : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಮತ್ತು ಹೈದೆರಾಬಾದ್ ಕರ್ನಾಟಕ ವೃಂದದ ಸಹಾಯಕ ಕಾರ್ಯಪಾಲಕ ಅಭಿಯಂತರರು ಗ್ರೇಡ್ 1 ಹುದ್ದೆಗಳಿಗೆ ಇದೀಗ ಕೆಪಿಎಸ್ಸಿ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ಲೋಕಸೇವಾ ಆಯೋಗ |
ಹುದ್ದೆಗಳ ಹೆಸರು: | ಸಹಾಯಕ ಕಾರ್ಯಪಾಲಕ ಅಭಿಯಂತರರು ಗ್ರೇಡ್ 1 |
ಒಟ್ಟು ಹುದ್ದೆಗಳು | 25 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಕರ್ನಾಟಕ ಸರ್ಕಾರ ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸಿವಿಲ್ ಇಂಜಿನಿಯರಿಂಗ್ ಅಥವಾ ಪರಿಸರ ಇಂಜಿನಿಯರಿಂಗ್ ಅಥವಾ ಕನ್ಸ್ಟ್ರಕ್ಷನ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಕೆಗೆ ಕನಿಷ್ಠ 18 ವರ್ಷ ಆಗಿರಬೇಕು.
ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ವಯೋಮಿತಿ.
ಎಸ್ಸಿ / ಎಸ್ಟಿ / ಪ್ರ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ.
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಶ್ರೇಣಿ : ರೂ.52650/- ರೂ.97100/-
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.
ಎಸ್ಸಿ / ಎಸ್ಟಿ / ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ರೂ.35 ರ ಅರ್ಜಿ ಪ್ರಕ್ರಿಯೆ ಶುಲ್ಕವನ್ನು ಎಲ್ಲ ಅಭ್ಯರ್ಥಿಗಳು ಕಡ್ಡಾಯವಾಗಿ ಪಾವತಿಸಬೇಕು.
ನೇರ ನೇಮಕಾತಿ ವಿಧಾನ
ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ
ಯಾರೇ ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಅರ್ಹರಲ್ಲ. ಈ ಪರೀಕ್ಷೆಯನ್ನು ಗರಿಷ್ಠ 150 ಅಂಕಗಳಿಗೆ ನಡೆಸಲಿದ್ದು, ಅಭ್ಯರ್ಥಿಯು ಈ ಪತ್ರಿಕೆಯಲ್ಲಿ ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಪಡೆಯಬೇಕು.
ಈ ಪ್ರಶ್ನೆ ಪತ್ರಿಕೆಯನ್ನು ಎಸ್ಎಸ್ಎಲ್ಸಿ ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿಕೊಂಡು ಸಿದ್ಧಪಡಿಸಲಾಗುವುದು.
ಸ್ಪರ್ಧಾತ್ಮಕ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆಯು ತಲಾ 300 ಅಂಕಗಳಿಗೆ ಎರಡು ಲಿಖಿತ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿದ್ದು, ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ಇರುತ್ತದೆ.
ಪರೀಕ್ಷಾ ವಿಧಾನ:
1 ಸಾಮಾನ್ಯ ಪತ್ರಿಕೆ (ಜನರಲ್ ಪೇಪರ್) 300 ಅಂಕಗಳು
ಕಾಲಾವಕಾಶ 01-30 ಗಂಟೆ
2 ನಿರ್ದಿಷ್ಟ ಪತ್ರಿಕೆ (ಸ್ಪೆಸಿಫಿಕ್ ಪೇಪರ್) 300 ಅಂಕಗಳು
ಕಾಲಾವಕಾಶ 2 ಗಂಟೆ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 17-09-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 17-10-2022 |
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ | 18-10-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ -1 | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ -2 | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |