2022-23ನೇ ಸಾಲಿನ ಪರಿಶಿಷ್ಟ ಜಾತಿಯ ಭೋವಿ ಸಮುದಾಯದವರ ಆರ್ಥಿಕ ಅಭಿವೃದ್ಧಿಗಾಗಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಈ ಕೆಳಕಂಡ ಯೋಜನೆಗಳಿಗೆ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳ ವಿವರ Vehicle Subsidy
1. ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-3 (ದ್ವಿ-ಚಕ್ರ / ಪ್ರಿ-ಚಕ್ರ ಸರಕು ಸಾಗಾಣಿಕೆ ವಾಹನ)
ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ https://sevasindhu karnataka.gov.in ನ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರದಲ್ಲಿ ಆನ್‌ಲೈನ್ ಮುಖಾಂತರ ಅಸಕ್ತರು ಮೇಲಿನ ಯೋಜನೆಗಳಿಗೆ ಅರ್ಜಿಗಳನ್ನು ಸಲ್ಲಿಸಿ ಸದುಪಯೋಗ ಪಡಿಸಿಕೊಳ್ಳಲು ಈ ಮೂಲಕ ಕೋರಲಾಗಿದೆ.ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31.12.2022ಕ್ಕೆ ನಿಗದಿಪಡಿಸಿದೆ. Vehicle Subsidy
ಈ ಸೌಲಭ್ಯ ಪಡೆಯಬೇಕಾದ ಅಭ್ಯರ್ಥಿಗೆ ಇರಬೇಕಾದ ಸಾಮಾನ್ಯ ಅರ್ಹತೆಗಳು ಮತ್ತು ಷರತ್ತುಗಳು:
1. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪರಿಶಿಷ್ಟ ಜಾತಿಯ ಭೋವಿ ಜನಾಂಗಕ್ಕೆ ಸೇರಿದವರಾಗಿರಬೇಕು ಹಾಗೂ ಕರ್ನಾಟಕ ರಾಜ್ಯದ
2. ಗ್ರಾಮೀಣ ಪ್ರದೇಶದಲ್ಲಿ UNFO ಕುಟುಂಬದ ವಾರ್ಷಿಕ ಆದಾಯವು ರೂ. 1,50,000/- ಮತ್ತು ನಗರ ಪ್ರದೇಶದಲ್ಲಿ ರೂ. 2,00,000/-ಗಳ ಮಿತಿಯಲ್ಲಿರಬೇಕು.
3. ಅರ್ಜಿದಾರರು ಕನಿಷ್ಟ 21 ವರ್ಷಗಳಿಂದ ಗರಿಷ್ಟ 50 ವರ್ಷದೊಳಗಿರಬೇಕು.
4. ಅರ್ಜಿ ಸಲ್ಲಿಸುವವರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು ಮತ್ತು ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು.
5. ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ ದ್ವಿ-ಚಕ್ರ / ತ್ರಿ-ಚಕ್ರ ಸರಕು ಸಾಗಾಣಿಕೆ ವಾಹನ ಉದ್ದೇಶಗಳಿಗೆ ಘಟಕ ವೆಚ್ಚದಲ್ಲಿ ರೂ.50,000/-ಗಳ ಸಹಾಯಧನ ಹಾಗೂ ರೂ.20,000/- ಸಾಲ ಮಂಜೂರು ಮಾಡಿ ಒಟ್ಟು ರೂ.70000/- ಘಟಕ ವೆಚ್ಚದಲ್ಲಿ ಯೋಜನೆಯನ್ನು ಅನುಷ್ಟಾನಗೊಳಿಸಲಾಗುವುದು. ಘಟಕ ವೆಚ್ಚ ಮೀರಿದಲ್ಲಿ ಸದರಿ ವ್ಯತ್ಯಾಸದ ಮೊತ್ತವನ್ನು ಅರ್ಜಿದಾರರ ಸೇವಾ ವ್ಯಾಪ್ತಿಯ ಬ್ಯಾಂಕ್‌ಗಳಿಂದ ಮಂಜೂರಾತಿ ಪಡೆಯುವ ಷರತ್ತಿಗೆ ಒಳಪಟ್ಟು ಸಹಾಯಧನ ಮತ್ತು ಸಾಲ ಮಂಜೂರು ಮಾಡಲಾಗುತ್ತದೆ.
6. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸಂಬಂದಪಟ್ಟಂತೆ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು. Vehicle Subsidy
***ಲೇಖನ ಮುಕ್ತಾಯ ***
ಉದ್ಯೋಗ ಸುದ್ದಿ
ಅಬಕಾರಿ ಇಲಾಖೆ ನೇಮಕಾತಿ 2022-23
Karnataka Excise Department Recruitment 2023 – ಕರ್ನಾಟಕ ಅಬಕಾರಿ ಇಲಾಖೆ: ಖಾಲಿ ಇರುವ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಕರ್ನಾಟಕ ಅಬಕಾರಿ ಇಲಾಖೆ – Karnataka Excise Department |
ಹುದ್ದೆಗಳ ಹೆಸರು: | ಕಾನ್ಸ್ಟೇಬಲ್ , ಸಬ್-ಇನ್ಸ್ಪೆಕ್ಟರ್ |
ಒಟ್ಟು ಹುದ್ದೆಗಳು | 1100 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಕಾನ್ಸ್ಟೇಬಲ್ : 1000 ಹುದ್ದೆಗಳು |
ಸಬ್ ಇನ್ಸ್ ಪೆಕ್ಟರ್ : 100 ಹುದ್ದೆಗಳು |
ವಿದ್ಯಾರ್ಹತೆ:
ಕರ್ನಾಟಕ ಅಬಕಾರಿ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ , 12ನೇ, ಪದವಿಯನ್ನು ಪೂರ್ಣಗೊಳಿಸಿರಬೇಕು.
ವೇತನಶ್ರೇಣಿ:
ಅಬಕಾರಿ ಪೇದೆ ಹುದ್ದೆಗೆ ವೇತನ ಶ್ರೇಣಿ ರೂ.21400-42000.
ಅಬಕಾರಿ ನಿರೀಕ್ಷಕರು ಹುದ್ದೆಗೆ ವೇತನ ಶ್ರೇಣಿ ರೂ.37900-70850.
ಕರ್ನಾಟಕ ರಾಜ್ಯ ಸರ್ಕಾರವು ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1,100 ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಿದೆ. ಈ ಕುರಿತು ಅಬಕಾರಿ ಇಲಾಖೆ ಸಚಿವ ಕೆ.ಗೋಪಾಲಯ್ಯ ಮಾಹಿತಿ ನೀಡಿದ್ದಾರೆ.
ರಾಜ್ಯ ಬೊಕ್ಕಸಕ್ಕೆ ಹೆಚ್ಚು ಆದಾಯ ತಂದುಕೊಡುವ ಅಬಕಾರಿ ಇಲಾಖೆಯ ಬಲವರ್ಧನೆಗೆ ಸರ್ಕಾರ ಪ್ರಾಧ್ಯಾನತೆ ನೀಡಿದೆ. ಈ ವರ್ಷ 29000 ಕೋಟಿ ರೂ ಆದಾಯ ಗುರಿ ನೀಡಿದ್ದು, ಈವರೆಗೆ 19,897 ಕೋಟಿ ರೂ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 17,225 ಕೋಟಿ ರೂ ಸಂಗ್ರಹವಾಗಿತ್ತು ಎಂದು ಗೋಪಾಲಯ್ಯ ತಿಳಿಸಿದ್ದಾರೆ.
ಹೊಸ ಮದ್ಯ ತಯಾರಿಕೆಗೆ ಉದ್ಯಮಿಗಳು ಮುಂದೆ ಬಂದರೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಅನುಮೋದನೆ ನೀಡುತ್ತೇವೆ. ಇದರಿಂದ ರಾಜ್ಯದಲ್ಲಿ ಉದ್ಯೋಗ ಸೃಜನೆ ಹೆಚ್ಚಾಗುತ್ತದೆ ಎಂದು ಅವರು ಹೇಳಿದ್ದಾರೆ. ಹಳ್ಳಿಗಳ ಸಣ್ಣಪುಟ್ಟ ಅಂಗಡಿಗಳಲ್ಲಿ ಮದ್ಯ ಮಾರಾಟವಾಗುತ್ತಿರುವ ಬಗ್ಗೆ ದೂರುಗಳಿವೆ. ಕೆಲ ಶಾಸಕರು ಕೂಡ ಈ ವಿಷಯ ಗಮನಕ್ಕೆ ತಂದಿದ್ದಾರೆ. ಇದರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸುವುದಾಗಿ ಸಚಿವರು ತಿಳಿಸಿದ್ದಾರೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಶೀಘ್ರದಲ್ಲೇ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಶೀಘ್ರದಲ್ಲೇ |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಶೀಘ್ರದಲ್ಲೇ |
ಜಿಲ್ಲಾವಾರು ಉದ್ಯೋಗಗಳು |