ಹೊಸ ನೇಮಕಾತಿ ಅಧಿಸೂಚನೆ 2023
Bagalkot Co-operative Bank recruitment 2023ಬಾಗಲಕೋಟೆ ಜಿಲ್ಲೆಯ ಮರ್ಚನಂಟ್ಸ್ ಪತ್ತಿನ ಸಹಕಾರಿ ಸಂಘ ನಿ.ಕೆರೂರದಲ್ಲಿ ಖಾಲಿ ಇರುವ 08 ದ್ವಿತೀಯ ದರ್ಜೆ ಸಹಾಯಕ ಮತ್ತು ಸಿಪಾಯಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
ಬಾಗಲಕೋಟೆ ಜಿಲ್ಲೆಯ ಮರ್ಚನಂಟ್ಸ್ ಪತ್ತಿನ ಸಹಕಾರಿ ಸಂಘ ನಿ.ಕೆರೂರದಲ್ಲಿ ಖಾಲಿ ಇರುವ 08 ದ್ವಿತೀಯ ದರ್ಜೆ ಸಹಾಯಕ ಮತ್ತು ಸಿಪಾಯಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬಾಗಲಕೋಟೆ ಜಿಲ್ಲೆಯ ಮರ್ಚನಂಟ್ಸ್ ಪತ್ತಿನ ಸಹಕಾರಿ ಸಂಘ ನಿ |
ಹುದ್ದೆಗಳ ಹೆಸರು: | ದ್ವಿತೀಯ ದರ್ಜೆ ಸಹಾಯಕ, ಸಿಪಾಯಿ |
ಒಟ್ಟು ಹುದ್ದೆಗಳು | 08 |
ಅರ್ಜಿ ಸಲ್ಲಿಸುವ ಬಗೆ | ಆಫ್ಲೈನ್ |
ದ್ವಿತೀಯ ದರ್ಜೆ ಸಹಾಯಕ : 05 |
ಸಿಪಾಯಿ : 03 |
ವಿದ್ಯಾರ್ಹತೆ:
– ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ವಿದ್ಯಾರ್ಹತೆಯನ್ನು ಪಡೆದಿರಬೇಕು. ಕನ್ನಡ ಮಾದ್ಯಮದಲ್ಲಿ ಮಾತ್ರ ವ್ಯಾಸಂಗವನ್ನು ಮಾಡಿರಬೇಕು. |
– ಸಿಪಾಯಿ ಹುದ್ದೆಗಳಿಗೆ ಎಸೆಸೆಲ್ಸಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ಕನ್ನಡ ಮಾದ್ಯಮದಲ್ಲಿ ಮಾತ್ರ ವ್ಯಾಸಂಗವನ್ನು ಮಾಡಿರಬೇಕು. |
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 40 ವರ್ಷಗಳು
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.
ವೇತನಶ್ರೇಣಿ:
– ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ 16000/- ರಿಂದ 29600/-
– ಸಿಪಾಯಿ ಹುದ್ದೆಗಳಿಗೆ 10400/- ರಿಂದ 16400/- ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
– ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ
ಸಾಮಾನ್ಯ ಅಭ್ಯರ್ಥಿಗಳು 1000 /- ರೂ ಅರ್ಜಿ ಶುಲ್ಕವನ್ನು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು 500 /- ರೂ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
– ಸಿಪಾಯಿ ಹುದ್ದೆಗಳಿಗೆ
ಸಾಮಾನ್ಯ ಅಭ್ಯರ್ಥಿಗಳು 500 /- ರೂ ಅರ್ಜಿ ಶುಲ್ಕವನ್ನು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು 250 /- ರೂ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
ಮರ್ಚನಂಟ್ಸ್ ಪತ್ತಿನ ಸಹಕಾರಿ ಸಂಘ ನಿ. ಕೆರೂರ,
ತಾ|| ಬಾದಾಮಿ, ಜಿ|| ಬಾಗಲಕೋಟೆ ಪಿನ್ ಕೋಡ್-587206
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 14 ಫೆಬ್ರುವರಿ 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 3 ಮಾರ್ಚ್ 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |