ಕೃಷಿ ಇಲಾಖೆಯಲ್ಲಿ 300 ಖಾಲಿ ಹುದ್ದೆಗಳು । Agricultural Department Recruitment 2022

Agricultural Department Recruitment 2022: ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಬುಧವಾರ ತಿಳಿಸಿದ್ದಾರೆ.

 

 

ಇಲಾಖೆ ಹೆಸರು: ಕೃಷಿ ಇಲಾಖೆ
ಹುದ್ದೆಗಳ ಹೆಸರು: ಕೃಷಿ ಅಧಿಕಾರಿ
ಒಟ್ಟು ಹುದ್ದೆಗಳು  300
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಬುಧವಾರ ತಿಳಿಸಿದ್ದಾರೆ.

ಕಳೆದ ಜನವರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲು ಒಪ್ಪಿಗೆ ನೀಡುವಂತೆ ಸಚಿವರು ಆರ್ಥಿಕ ಇಲಾಖೆಗೆ ಮನವಿ ಮಾಡಿದ್ದರು. ಅದರಂತೆ ಆರ್ಥಿಕ ಇಲಾಖೆ ಈಗ‌ ಒಪ್ಪಿಗೆ ಸೂಚಿಸಿದ್ದು, ಶೀಘ್ರ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ.

300 ಹುದ್ದೆಗಳನ್ನು ಕರ್ನಾಟಕ ಕೃಷಿ ಸೇವೆಗಳು(ವೃಂದ ಮತ್ತು ನೇಮಕಾತಿ)ನಿಯಮಗಳು, 2021ರಲ್ಲಿ ನಿಗದಿಪಡಿಸಿರುವ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿಯಮಾನುಸಾರ ಕೂಡಲೇ ಅಗತ್ಯ ಕ್ರಮಕೈಗೊಳ್ಳುವಂತೆ ಕೃಷಿ ಇಲಾಖೆ (ಸೇವೆಗಳು) ಸರ್ಕಾರದ ಅಧೀನ ಕಾರ್ಯದರ್ಶಿ ಜೋನ್ ಪುಕಾಶ್ ರೋಡ್ರಿಗಸ್ ಅವರು ಕೃಷಿ ಇಲಾಖೆ ಆಯುಕ್ತರಿಗೆ ನಿರ್ದೇಶಿಸಿರುವುದಾಗಿ ಸಚಿವರು ಹೇಳಿದ್ದಾರೆ.

ಕೃಷಿ ಪದವೀಧರರಿಗೆ ಶೇ. 85 ರಷ್ಟು ಹುದ್ದೆಗಳು, ಉಳಿದ ಶೇ. 15 ರಷ್ಟು ಪೋಸ್ಟ್‌ಗಳನ್ನು ಬಿ.ಟೆಕ್ (ಕೃಷಿ ಎಂಜಿನಿಯರಿಂಗ್) ಅಥವಾ ಬಿ.ಟೆಕ್ (ಆಹಾರ ತಂತ್ರಜ್ಞಾನ/ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ ಬಯೋಟೆಕ್ನಾಲಜಿ ಹೊಂದಿರುವವರು ಅರ್ಹರಿರುತ್ತಾರೆ.

ಈ ಹುದ್ದೆಗಳಿಗೆ ಶೀಘ್ರದಲ್ಲೇ ಅಧಿಕೃತ ನೇಮಕಾತಿ ಅಧಿಸೂಚನೆ ಬಿಡುಗಡೆ ಆಗಲಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಇಂದಿನಿಂದಲೇ ತಯಾರಿ ನಡೆಸಿ.

error: Content is protected !!