ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಪಶು ಸಂಗೋಪನಾ ಅಭಿವೃದ್ಧಿ ಮಿಷನ್ ಅಡಿಯಲ್ಲಿ ಗ್ರಾಮೀಣ ಪಶು ಸಂಗೋಪನಾ ನಿಗಮವು ಉನ್ನತ ಗುಣಮಟ್ಟದ ಪ್ರಾಣಿ ಉತ್ಪನ್ನಗಳನ್ನು ಸಮಂಜಸವಾದ ಬೆಲೆಯಲ್ಲಿ ಮಾರಾಟ ಮಾಡಲು ಪ್ರತಿ ಗ್ರಾಮಪಂಚಾಯ್ತಿಗೆ ಒಂದು ಹುದ್ದೆಯಾಗಿ ಪಶು ಸಂಗೋಪನಾ ಕಾರ್ಯಕರ್ತರ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿ ಪಡಿಸಿದ ಕೊನೆಯ ದಿನಾಂಕ : 25/08/2021 ರೊಳಗೆ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ / ಬೋರ್ಡ್ ಯಿಂದ SSLC ವಿದ್ಯಾರ್ಹತೆಯನ್ನು ಪಡೆದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಟ 40 ವರ್ಷಗಳನ್ನು ಮೀರಿರಬಾರದು.
ವೇತನ ಶ್ರೇಣಿ:
ಅರ್ಜಿ ಸಲ್ಲಿಸಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ನೇಮಕಾತಿ ನಿಯಮಾನುಸಾರ Rs 10,000/- ವೇತನವನ್ನು ನೀಡಲಾಗುವುದು.
ಆಯ್ಕೆ ವಿಧಾನ:
ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಶು ಸಂಗೋಪನಾ ಕಾರ್ಯಕರ್ತರ ಆಯ್ಕೆಯನ್ನು ಮಾಡಲಾಗುವುದು. ಒಂದು ಗ್ರಾಮ ಪಂಚಾಯಿತಿಯಿಂದ ಒಂದು ಪಶು ಸಂಗೋಪನೆ ಕಾರ್ಯಕರ್ತರನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20 ಆಗಸ್ಟ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25 ಆಗಸ್ಟ್ 2021