ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ಸಂಸ್ಥೆಯು ವಿಮಾನ ನಿಲ್ದಾಣ ಪ್ರಾಧಿಕಾರದ ಕಾಯ್ದೆ 1994 ರ ಮೂಲಕ ರಚಿಸಲಾದ ಶಾಸನಬದ್ಧ ಸಂಸ್ಥೆಯಾದ್ದು, ಇದು ಭಾರತ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 368 ಜ್ಯೂನಿಯರ್ ಎಕ್ಸಿಕ್ಯುಟಿವ್ ಮತ್ತು ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಜನವರಿ 14,2021ರೊಳಗೆ ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳು: 368
ಆಯ್ಕೆ ವಿಧಾನ:
ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ವಿದ್ಯಾರ್ಹತೆ:
ಹುದ್ದೆಗಳಿಗೆ ಅನುಸಾರವಾಗಿ ಅಭ್ಯರ್ಥಿಗಳು ಬಿ.ಇ/ ಬಿ.ಟೆಕ್/ ಬಿ.ಎಸ್ಸಿ, ಗ್ರಾಜುಯೇಶನ್ ಮತ್ತು ಎಂಬಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ
ಸಾಮಾನ್ಯ/ ಹಿಂದುಳಿದ ಅಭ್ಯರ್ಥಿಗಳು 1000/-ರೂ,
ಪ.ಜಾ/ ಪ.ಪಂ ಅಭ್ಯರ್ಥಿಗಳು 170/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗಿರುತ್ತದೆ.
ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ವಯೋಮಿತಿ
ದಿನಾಂಕ ನವೆಂಬರ್ 30, 2020 ಕ್ಕೆ ಅನ್ವಯಿಸುವಂತೆ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಠ- 32 ವರ್ಷಗಳು ಮತ್ತು ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಗರಿಷ್ಠ- 27 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.
ವೇತನ ಶ್ರೇಣಿ ಹುದ್ದೆಗಳಿಗೆ ಅನುಗುಣವಾಗಿ:
ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 60,000/- ರಿಂದ 1,80,000/-ರೂ ಮತ್ತು
ಜ್ಯೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,40,000/-ರೂ.ಗಳ ವೇತನವನ್ನು ನೀಡಲಾಗುವುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15 ಡಿಸೆಂಬರ್ 2020
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14 ಜನವರಿ 2021
ವೆಬ್ಸೈಟ್ – Website |
ನೋಟಿಫಿಕೇಶನ್ – Notification |