ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಲ್ಲಿ ಬ್ಯಾಂಕ್ ಸಹಾಯಕ ನೇಮಕಾತಿ 2022
Karnataka Apex Bank recruitment 2022: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಖಾಲಿ ಇರುವ ಬ್ಯಾಂಕ್ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ |
ಹುದ್ದೆಗಳ ಹೆಸರು: | ಬ್ಯಾಂಕ್ ಸಹಾಯಕ |
ಒಟ್ಟು ಹುದ್ದೆಗಳು | 79 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಕರ್ನಾಟಕ ಅಪೆಕ್ಸ್ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದೇ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳ ಒಳಗಿರಬೇಕು.
ವಯೋಮಿತಿ ಸಡಿಲಿಕೆ:
2ಎ,2ಬಿ,3ಎ,3ಬಿ, ಅಭ್ಯರ್ಥಿಗಳು: 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 05 ವರ್ಷಗಳು
ಉದ್ಯೋಗ ಮಾಹಿತಿ: ಹುಬ್ಬಳ್ಳಿ ರೈಲ್ವೆ ನೇಮಕಾತಿ ಅಧಿಸೂಚನೆ 2022
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.28425-87125/- ವೇತನ ಶ್ರೇಣಿ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
2ಎ,2ಬಿ,3ಎ,3ಬಿ, ಸಾಮಾನ್ಯ ಅಭ್ಯರ್ಥಿಗಳು: 1000/-
ಎಸ್ಸಿ/ಎಸ್ಟಿ ಅಭ್ಯರ್ಥಿಗಳು: 500/-
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 17-03-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 16-04-2022 |
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ | 16-04-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |