ವಿದ್ಯಾಸಿರಿ’ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ – Vidyasiri’ Scholarship

ಅಲ್ಪಸಂಖ್ಯಾತ ಇಲಾಖೆಯಿಂದ ‘ವಿದ್ಯಾಸಿರಿ’ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಎಸ್ಸೆಸೆಲ್ಸಿ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ, ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯವನ್ನು ಒದಗಿಸಲು ಪ್ರತಿ ತಿಂಗಳು ರೂ.1,500 ರಂತೆ ಶೈಕ್ಷಣಿಕ ಅವಧಿಯ 10 ತಿಂಗಳಿಗೆ( ಅನುದಾನ ಅಭ್ಯತೆಯನುಸಾರ) ಒಟ್ಟು ರೂ. 15,000 ಗಳನ್ನು ಸಂಬಂಧಪಟ್ಟ ವಿದ್ಯಾರ್ಥಿಗಳು ಬ್ಯಾಂಕ್‌ ಖಾತೆಗೆ ಆನ್‌ಲೈನ್ ಮುಖಾಂತರ ಜಮಾ ಮಾಡಲಾಗುವುದು.

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನ ನೀಡಿದೆ. 2022-23 ನೇ ಸಾಲಿನ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಪಿಯುಸಿ ಹಾಗೂ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ.
ಅತ್ಯುತ್ತಮ ಬೆಲೆಗೆ ಅಂದವಾದ ಸ್ಟೈಲಿಷ್‌ ಉಡುಪು! ಅಮೆಜಾನ್‌ ಹಬ್ಬದ ಕೊಡುಗೆ

ಈ ಕುರಿತು ಅಲ್ಪ ಸಂಖ್ಯಾತರ ನಿರ್ದೇಶನಾಲಯ ಪ್ರಕಟೆಣೆಯನ್ನು ಹೊರಡಿಸಿದೆ. ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದ, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಯಾವುದೇ ಇಲಾಖೆಯ ಸರ್ಕಾರಿ ಅನುದಾನಿತ ವಿದ್ಯಾರ್ಥಿನಿಲಯ, ಹಾಗೂ ವಸತಿ ಕಾಲೇಜುಗಳಲ್ಲಿ ಪ್ರವೇಶ ದೊರೆಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ, ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯವನ್ನು ಒದಗಿಸಲು ಪ್ರತಿ ತಿಂಗಳು ರೂ.1,500 ರಂತೆ ಶೈಕ್ಷಣಿಕ ಅವಧಿಯ 10 ತಿಂಗಳಿಗೆ( ಅನುದಾನ ಲಭ್ಯತೆಯನುಸಾರ) ಒಟ್ಟು ರೂ. 15,000 ಗಳನ್ನು ಸಂಬಂಧಪಟ್ಟ ವಿದ್ಯಾರ್ಥಿಗಳು ಬ್ಯಾಂಕ್‌ ಖಾತೆಗೆ ಆನ್‌ಲೈನ್ ಮುಖಾಂತರ ಜಮಾ ಮಾಡಲಾಗುವುದು. ಈ ಸೌಲಭ್ಯವನ್ನು ಪಡೆದಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳ ಸಹಿತ ಸೇವಾಸಿಂಧು ಮುಖಾಂತರ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ 8277799990 ಹಾಗೂ ಇಲಾಖಾ ಅಧಿಕೃತ https://dom.karnataka.gov.in ಸಂಪರ್ಕಿಸಬಹುದು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ.
ಪಿಯುಸಿ / ಪದವಿ ಸೆಮಿಸ್ಟರ್ ಅಂಕಪಟ್ಟಿ.
ಆಧರ್ ಕಾರ್ಡ್‌.
ಬ್ಯಾಂಕ್ ಪಾಸ್‌ ಬುಕ್‌ ಪ್ರತಿ.
ಜಾತಿ ಪ್ರಮಾಣ ಪತ್ರ.
ಆದಾಯ ಪ್ರಮಾಣ ಪತ್ರ.
ಪಾಸ್‌ ಪೋರ್ಟ್‌ ಅಳತೆಯ ಭಾವಚಿತ್ರ.
ಶಾಲಾ ಶುಲ್ಕದ ರಶೀದಿ.
ನಿವಾಸಿ ದೃಢೀಕರಣ ಪತ್ರ.

ಪ್ರಮುಖ ದಿನಾಂಕಗಳು 
ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 19-09-2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 20-10-2022

error: Content is protected !!