ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ನ.30ರೊಳಗೆ ಅರ್ಜಿ ಹಾಕಿ

2021-22ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಮತ್ತು “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಕಾರ್ಯಕ್ರಮಗಳಡಿ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ.

 

 

ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಆನ್‌ಲೈನ್ ಮೂಲಕ ಅಕ್ಟೋಬರ್ 31,2021ರೊಳಗೆ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ನಿಗದಿ ಮಾಡಲಾಗಿತ್ತು. ಆದರೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಈ ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ನವೆಂಬರ್ 30,2021ರ ವರೆಗೆ ವಿಸ್ತರಿಸಲಾಗಿದೆ.

ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005/8050770004

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಅಧಿಕೃತ ವೆಬ್‌ಸೈಟ್:  Click Here

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್:  Click Here

 

error: Content is protected !!