ಬಾಗಲಕೋಟೆ ಜಿಲ್ಲೆಯ ನಾಯಾಲಯ ನೇಮಕಾತಿ ಅಧಿಸೂಚನೆ 2022
Bagalkot District Court Recruitment 2022: ಬಾಗಲಕೋಟೆ ಜಿಲ್ಲೆಯ ನಾಯಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ ಶೀಘ್ರಲಿಪಿಗಾರರು ಗ್ರೇಡ್-3, ಬೆರಳಚ್ಚುಗಾರರು, ಬೆರಳಚ್ಚು-ನಕಲುಗಾರರು, ಆದೇಶ ಜಾರಿಕಾರರು ಮತ್ತು ಸಿಪಾಯಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಬಾಗಲಕೋಟೆ ಜಿಲ್ಲೆಯ ನಾಯಾಲಯ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 54 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ
ಶೀಘ್ರಲಿಪಿಗಾರರು (ಗ್ರೇಡ್-3): 13
ಬೆರಳಚ್ಚುಗಾರರು: 2
ಬೆರಳಚ್ಚು-ನಕಲುಗಾರರು: 1
ಆದೇಶ ಜಾರಿಕಾರರು: 1
ಸಿಪಾಯಿ: 37
ಶೈಕ್ಷಣಿಕ ವಿದ್ಯಾರ್ಹತೆ
- ಯಾವುದೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸ್ ಮಾಡಿರಬೇಕು. ಜೊತೆಗೆ ನಿಗದಿಪಡಿಸಿದ ಇತರೆ ಅಗತ್ಯ ಅರ್ಹತೆಗಳನ್ನು ಹೊಂದಿರಬೇಕು.
- ಬೆರಳಚ್ಚುಗಾರ ಮತ್ತು ಬೆರಳಚ್ಚು ನಕಲುಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಬೆರಳಚ್ಚು ಪರೀಕ್ಷೆ, ಜೂನಿಯರ್ ಮತ್ತು ಸೀನಿಯರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
- ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರಿಣತಿ ಅಪೇಕ್ಷಣೀಯ. ಆದೇಶ ಜಾರಿಕಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು ಲಘು ಮತ್ತು ಭಾರೀ ವಾಹನ ಚಾಲನಾ ಪರವಾನಗಿ ಹೊಂದಿರುವುದು ಕಡ್ಡಾಯ.
- ಅಭ್ಯರ್ಥಿಗಳಿಗೆ ಸ್ಥಳೀಯ ಭಾಷೆ ಕನ್ನಡದಲ್ಲಿ ಓದಲು, ಬರೆಯಲು ಮತ್ತು ವ್ಯವಹರಿಸುವ ಜ್ಞಾನ ಇರಬೇಕು.
ಸಿಪಾಯಿ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಪಾಸ್ ಆಗಿರಬೇಕು. ಹಾಗೂ ಕನ್ನಡ ಓದಲು, ಬರೆಯಲು ಗೊತ್ತಿರಬೇಕು.
ವಯೋಮಿತಿ
ಯಾವುದೇ ಹುದ್ದೆಗೆ ಅಪ್ಲಿಕೇಶನ್ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ ಅರ್ಹತೆಗಳು ವರ್ಗಾವಾರು ಕೆಳಗಿನಂತಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ.
ಇದನ್ನೂ ಓದಿ: ಸಹಕಾರಿ ಬ್ಯಾಂಕ್ ನಲ್ಲಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಅಹ್ವಾನ
ವೇತನ ಶ್ರೇಣಿ
ಶೀಘ್ರಲಿಪಿಗಾರರು: ರೂ.27650-52650.
ಬೆರಳಚ್ಚುಗಾರರು: ರೂ.21400-42000.
ಬೆರಳಚ್ಚು ನಕಲುಗಾರರು: ರೂ.21400-42000.
ಆದೇಶ ಜಾರಿಕಾರರು: ರೂ.19950-37900.
ಸಿಪಾಯಿ : ರೂ.17000-28950.
ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300.
ಎಸ್‌ಸಿ / ಎಸ್‌ಟಿ / ಪ್ರವರ್ಗ-1, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕವನ್ನು ಎಸ್‌ಬಿಐ ಬ್ಯಾಂಕ್‌ಗಳ ಯಾವುದೇ ಶಾಖೆಗಳಲ್ಲಿ ಪಾವತಿಸಬಹುದು. ಅಥವಾ ಆನ್‌ಲೈನ್ ಪೇಮೆಂಟ್ ಸಹ ಮಾಡಬಹುದು.
ಅರ್ಜಿಗಳನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬೇಕು. ನೇರವಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಅವಕಾಶ ಇಲ್ಲ.
ಆಯ್ಕೆ ಪ್ರಕ್ರಿಯೆ
ಶೀಘ್ರ ಲಿಪಿಗಾರರು ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಉಕ್ತಲೇಖನವನ್ನು ಕೊಟ್ಟು ಕಂಪ್ಯೂಟರ್‌ನಲ್ಲಿ ಬೆರಳಚ್ಚು ಮಾಡಿಸಿ ಅರ್ಹತಾ ಪರೀಕ್ಷೆ ನಡೆಸಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 21-03-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 21-04-2022 ರ ರಾತ್ರಿ 11-59 ರವರೆಗೆ. |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |