ಹೊಸ ನೇಮಕಾತಿ ಅಧಿಸೂಚನೆ 2023
BDCC Bank Bangalore Recruitment 2023 ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ, ಬೆಂಗಳೂರು ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಸುದ್ದಿ – ಕರ್ನಾಟಕ ಅಂಚೆ ಇಲಾಖೆ 40,889 ಹುದ್ದೆಗಳ ಭರ್ಜರಿ ನೇಮಕಾತಿ 2023
ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.
Bangalore DCC Bank Recruitment 2023 – : ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ, ಬೆಂಗಳೂರು ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ DCC Bank |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳ ಭರ್ತಿ |
ಒಟ್ಟು ಹುದ್ದೆಗಳು | ಒಟ್ಟು 96 ಹುದ್ದೆಗಳ ಭರ್ತಿ |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಶಾಖಾ ವ್ಯವಸ್ಥಾಪಕರು 4 |
ಹಿರಿಯ ಸಹಾಯಕರು 19 |
ಶೀಘ್ರಲಿಪಿಗಾರರು 1 |
ಕಿರಿಯ ಸಹಾಯಕರು 43 |
ಕಂಪ್ಯೂಟರ್ ಆಪರೇಟರ್ 2 |
ವಾಹನ ಚಾಲಕರು 4 |
ನಾಲ್ಕನೇ ದರ್ಜೆ ನೌಕರರು 23 |
ವಿದ್ಯಾರ್ಹತೆ:
ಶಾಖಾ ವ್ಯವಸ್ಥಾಪಕರು & ಹಿರಿಯ ಸಹಾಯಕರು
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆಯಾಗಿರಬೇಕು.
• ಶೀಘ್ರಲಿಪಿಗಾರರು
ಈ ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಅಥವಾ 3 ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ನಲ್ಲಿ ಉತ್ತೀರ್ಣರಾಗಿರಬೇಕು. ಸೀನಿಯರ್ ಕನ್ನಡ 0ಮತ್ತು ಇಂಗ್ಲಿಷ್ ಶೀಘ್ರಲಿಪಿಯಲ್ಲಿ ಉತ್ತೀರ್ಣರಾಗಿರಬೇಕು.
• ಕಿರಿಯ ಸಹಾಯಕರು
ಈ ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
• ಕಂಪ್ಯೂಟರ್ ಆಪರೇಟರ್
ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಥವಾ 3 ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ನಲ್ಲಿ ಉತ್ತೀರ್ಣರಾಗಿರಬೇಕು. ಸೀನಿಯರ್ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ನಲ್ಲಿ ಉತ್ತೀರ್ಣರಾಗಿರಬೇಕು.
• ವಾಹನ ಚಾಲಕರು
ಈ ಹುದ್ದೆಗಳಿಗೆ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಲಘು ಮತ್ತು ಭಾರಿ ವಾಹನ ಚಾಲನೆ ಪರವಾನಗಿ ಹೊಂದಿರಬೇಕು.
• ನಾಲ್ಕನೇ ದರ್ಜೆ ನೌಕರರು
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
(ವಾಹನ ಚಾಲಕರು ಮತ್ತು ನಾಲ್ಕನೇ ದರ್ಜೆ ನೌಕರರು ಹುದ್ದೆ ಹೊರತುಪಡಿಸಿ ಉಳಿದ ಹುದ್ದೆಗಳಿಗೆ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು ಹಾಗೂ ಎಲ್ಲಾ ಹುದ್ದೆಗಳಿಗೆ ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆಗೆ ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಬೇಕು)
ಉದ್ಯೋಗ ಸುದ್ದಿ – ಕರ್ನಾಟಕ ಅಂಚೆ ಇಲಾಖೆ 40,889 ಹುದ್ದೆಗಳ ಭರ್ಜರಿ ನೇಮಕಾತಿ 2023
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.23500/- ರೂ.70850/- ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 1500
• ಪ.ಜಾತಿ, ಪ.ಪಂ., ಪ್ರ1, ಅಂಗವಿಕಲ, ಮಾ.ಸೈನಿಕ ಅಭ್ಯರ್ಥಿಗಳು – ರೂ. 750
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು)
ಆಯ್ಕೆ ವಿಧಾನ:
• ದರ್ಜೆ ಸಹಾಯಕ & ಇದರ ಮೇಲ್ಪಟ್ಟ ಹುದ್ದೆ – ಲಿಖಿತ ಪರೀಕ್ಷೆಯಲ್ಲಿ ಪಡೆಯಲಾದ ಅಂಕಗಳ ಶೇಕಡಾವಾರು ಆಧಾರದ ಮೇಲೆ 1:5ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
• ಕಂಪ್ಯೂಟರ್ ಆಪರೇಟರ್ & ಶೀಘ್ರಲಿಪಿಗಾರರ ಹುದ್ದೆ – ಲಿಖಿತ ಪರೀಕ್ಷೆ, ಕಂಪ್ಯೂಟರ್ ಪರೀಕ್ಷೆ, ಶಾರ್ಟ್ ಹ್ಯಾಂಡ್ ಅಥವಾ ಟೈಪಿಂಗ್ ಪರೀಕ್ಷೆಯಲ್ಲಿ ಪಡೆಯಲಾದ ಅಂಕಗಳ ಶೇಕಡಾವಾರು ಆಧಾರದ ಮೇಲೆ 1:5ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
• ಗ್ರೂಪ್ ಡಿ ಹುದ್ದೆ – ನಿರ್ದಿಷ್ಟಪಡಿಸಲಾದ ಅರ್ಹತೆಯುಳ್ಳ ಲಿಖಿತ ಪರೀಕ್ಷೆಯಲ್ಲಿ ಪಡೆದುಕೊಂಡ ಪ್ರತಿಶತ ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಜನವರಿ 30, 2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಫೆಬ್ರವರಿ 28, 2023 |
ಶುಲ್ಕ ಪಾವತಿಸಲು ಕೊನೆಯ ದಿನಾಂಕ | ಫೆಬ್ರವರಿ 28, 2023 |
ಪ್ರಮುಖ ಲಿಂಕುಗಳು |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಯೌಟ್ಯೂಬ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |