ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನೇಮಕಾತಿ 2021 – Karnataka Jobs 2021

ಉದ್ಯೋಗ ಸುದ್ದಿ 

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸಲು ಒಟ್ಟು 9 ತಾಂತ್ರಿಕ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಮಾರ್ಚ್ 26,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ:

ತಾಲ್ಲೂಕು ಐ.ಇ.ಸಿ ಸಂಯೋಜಕರು : 4 ಹುದ್ದೆಗಳು

ತಾಂತ್ರಿಕ ಸಂಯೋಜಕರು : 3 ಹುದ್ದೆಗಳು

ತಾಂತ್ರಿಕ ಸಹಾಯಕರು (ಕೃಷಿ/ತೋಟಗಾರಿಕೆ) : 2 ಹುದ್ದೆಗಳು

ಒಟ್ಟು ಹುದ್ದೆಗಳು: 9

ಉದ್ಯೋಗ ಸ್ಥಳ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ

ವಿದ್ಯಾರ್ಹತೆ:
ಈ ಮೇಲೆ ತಿಳಿಸಿದ ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು BE/M.Tech (Civil), UG/PG in MSW/Mass Communication, BSc/MSc (Agriculture/Horticulture) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.


ವೇತನ ಶ್ರೇಣಿ:

– ತಾಂತ್ರಿಕ ಸಂಯೋಜಕರು ಹುದ್ದೆಗೆ ಮಾಸಿಕ 29,000/-

– ತಾಲ್ಲೂಕು ಐ.ಇ.ಸಿ ಸಂಯೋಜಕರು ಹುದ್ದೆಗೆ ಮಾಸಿಕ 20,000/- ರೂ ಮತ್ತು

– ತಾಂತ್ರಿಕ ಸಹಾಯಕರು (ಕೃಷಿ/ತೋಟಗಾರಿಕೆ) ಹುದ್ದೆಗೆ ಮಾಸಿಕ 24,000/-ರೂ ವೇತನವನ್ನು ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ದಿನಾಂಕ ಮಾರ್ಚ್ 26,2021ರ ಸಂಜೆ 5 ಗಂಟೆಯೊಳಗಾಗಿ ಪೋಸ್ಟ್ ಅಥವಾ ನೇರವಾಗಿ ಭೇಟಿಯಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್,
ಜಿಲ್ಲಾಡಳಿತ ಭವನ, ಬೀರಸಂದ್ರ,
ದೇವನಹಳ್ಳಿ ತಾಲ್ಲೂಕು-562110.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10 ಮಾರ್ಚ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26 ಮಾರ್ಚ್ 2021

Website  

Notification

 

error: Content is protected !!