ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 1322 ಆಶಾ ಕಾರ್ಯಕರ್ತೆಯರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿಮಾಡಿ ಮೂಲ ದಾಖಲೆಗಳೊಂದಿಗೆ ಸಮೀಪದ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಹೋಗಿ ಅಲ್ಲಿರುವ ವ್ಯೆದ್ಯಾಧಿಕಾರಿಗಳನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಸ್ಥಳೀಯ ಪ್ರದೇಶದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಸ್ಥಳೀಯ ಭಾಷಾ ಜ್ಞಾನ ಹೊಂದಿರಬೇಕು.
ಒಟ್ಟು ಹುದ್ದೆಗಳು: 1322
ಆಯ್ಕೆ ವಿಧಾನ:- ಹುದ್ದೆಗೆ ಅಭ್ಯರ್ಥಿಗಳನ್ನು ದಾಖಲಾತಿಗಳ ಪರಿಶೀಲನೆಯ ಮುಖಾಂತರ ಆಯ್ಕೆ ಮಾಡಲಾಗುವುದು
ವಿದ್ಯಾರ್ಹತೆ:- ಅಭ್ಯರ್ಥಿಗಳು 8 ನೇ ತರಗತಿಯನ್ನು ತೇರ್ಗಡೆಯಾಗಿರಬೇಕು. (Married Women)
ವಯೋಮಿತಿ:- ಅಭ್ಯರ್ಥಿಗಳು ಕನಿಷ್ಠ-25 ವರ್ಷ ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ-45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಸಂಬಳ: ಕಾರ್ಯವೈಖರಿ ಮೇಲೆ ಪ್ರೋತ್ಸಾಹ ಧನ ನೀಡಲಾಗುವುದು.
ಆಸಕ್ತರು ಸಂಬಂದಿಸಿದ ಮೂಲ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಗೆ ಹತ್ತಿರವಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನಗರ ಪ್ರಾಥಮಿಕ ಅರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸತಕ್ಕದ್ದು.ತದನಂತರ ದಾಖಲಾತಿಗಳನ್ನು ಪರಿಶೀಲಿಸಿ ಅಭ್ಯರ್ಥಿಯು ಅರ್ಹರಿದ್ದಲ್ಲಿ ಆಶಾ ಕಾರ್ಯಕರ್ತೆಯರಾಗಿ ಆಯ್ಕೆ ಮಾಡಲಾಗುವುದು.
ವೆಬ್ಸೈಟ್ – Website |
ನೋಟಿಫಿಕೇಶನ್ – Notification |