ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ನಲ್ಲಿ 80 ಯುಡಿಸಿ, ಫಾರ್ಮಾಸಿಸ್ಟ್, ಸ್ಟೋರ್ ಕೀಪರ್ ಕಮ್ ಕ್ಲರ್ಕ್, ಲ್ಯಾಬ್ ಟೆಕ್ನೀಶಿಯನ್ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಹುದ್ದೆಗಳ ವಿವರ:
ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) ನಲ್ಲಿ ಯುಡಿಸಿ, ಫಾರ್ಮಾಸಿಸ್ಟ್, ಸ್ಟೋರ್ ಕೀಪರ್ ಕಮ್ ಕ್ಲರ್ಕ್, ಲ್ಯಾಬ್ ಟೆಕ್ನೀಶಿಯನ್ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಯುಡಿಸಿ – 36 ಹುದ್ದೆಗಳು ಫಾರ್ಮಾಸಿಸ್ಟ್ – 2 ಹುದ್ದೆಗಳು ಸ್ಟೋರ್ ಕೀಪರ್ ಕಮ್ ಕ್ಲರ್ಕ್ – 3 ಹುದ್ದೆಗಳು ಲ್ಯಾಬ್ ಟೆಕ್ನೀಶಿಯನ್ – 33 ಹುದ್ದೆಗಳು ಗ್ಯಾಸ್ ಸ್ಟೀವರ್ಡ್ – 1 ಹುದ್ದೆ ಮೆಡಿಕಲ್ ರೆಕಾರ್ಡ್ ಟೆಕ್ನೀಶಿಯನ್ – 2 ಹುದ್ದೆಗಳು ಲೈಬ್ರರಿಯನ್ ಗ್ರೇಡ್ III – 3 ಹುದ್ದೆಗಳು ಒಟ್ಟು 80 ಹುದ್ದೆಗಳು |
ವಿದ್ಯಾರ್ಹತೆ:
10 ಅಥವಾ 12ನೇ ತರಗತಿ ಅಥವಾ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನದ ವಿವರ:
ಅಭ್ಯರ್ಥಿಗಳಿಗೆ ತಿಂಗಳಿಗೆ 23,100/- ರಿಂದ 43,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು ತದನಂತರ ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 750/-ರೂ ಮತ್ತು ಮೀಸಲಾತಿಯುಳ್ಳ ಅಭ್ಯರ್ಥಿಗಳು 450/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಬ್ರಾಡ್‌ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) ನೇಮಕಾತಿಯ ವಿವಿಧ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಆಗಸ್ಟ್ ಡಿಸೆಂಬರ್ 7,2021 ರಿಂದ ಡಿಸೆಂಬರ್ 18,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಹೊರತುಪಡಿಸಿ ಇನ್ಯಾವುದೇ ರೀತಿಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 7,2021 ರಿಂದ ಡಿಸೆಂಬರ್ 18,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.
Website |
Notification PDF |
BECIL Recruitment 2021: Apply online for 80 Lab Technician, UDC & other posts