ಹೊಸ ನೇಮಕಾತಿ ಅಧಿಸೂಚನೆ 2022
BEL Recruitment 2022 – ಬಿಇಎಲ್ ಅಥವಾ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಎಂಪ್ಲಾಯ್‌ಮೆಂಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಒಟ್ಟು 260 ಟ್ರೈನಿ ಹಾಗೂ ಪ್ರಾಜೆಕ್ಟ್ ಇಂಜಿನಿಯರ್‌ಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ BEL |
ಹುದ್ದೆಗಳ ಹೆಸರು: | ಪ್ರಾಜೆಕ್ಟ್ ಇಂಜಿನಿಯರ್ ಹಾಗೂ ಟ್ರೈನಿ ಇಂಜಿನಿಯರ್ |
ಒಟ್ಟು ಹುದ್ದೆಗಳು | 260 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ |
ಪ್ರಾಜೆಕ್ಟ್ ಇಂಜಿನಿಯರ್-I : 80 |
ಟ್ರೈನಿ ಇಂಜಿನಿಯರ್ : 180 |
ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ, ಬಿ.ಟೆಕ್, ಬಿಎಸ್ಸಿ ಪಾಸ್ ಮಾಡಿರಬೇಕು.
ವಯೋಮಿತಿ:
ಟ್ರೈನಿ ಇಂಜಿನಿಯರ್ ಹುದ್ದೆಗೆ ಗರಿಷ್ಠ 28 ವರ್ಷ ಮೀರಿರಬಾರದು.
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಗರಿಷ್ಠ 32 ವರ್ಷ ಮೀರಿರಬಾರದು.
ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಸರ್ಕಾರಿ ರೂಲ್ಸ್‌ನಂತೆ ಅನ್ವಯವಾಗಲಿವೆ. ಒಬಿಸಿ ವರ್ಗದವರಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಅನ್ವಯವಾಗಲಿವೆ.
ವೇತನಶ್ರೇಣಿ:
ಟ್ರೈನಿ ಇಂಜಿನಿಯರ್ ಹುದ್ದೆ : ಮೊದಲನೇ ವರ್ಷ ರೂ.30,000. 2ನೇ ವರ್ಷ ರೂ.35,000.
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆ: ಮೊದಲನೇ ವರ್ಷ ರೂ.40,000. 2ನೇ ವರ್ಷ ರೂ.45,000.
ಅರ್ಜಿ ಶುಲ್ಕ:
ಟ್ರೈನಿ ಇಂಜಿನಿಯರ್ ಹುದ್ದೆ : ರೂ.177.
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆ: ರೂ.472.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆ ಕುರಿತು ವಿವರಗಳನ್ನು ಅಭ್ಯರ್ಥಿಗಳಿಗೆ ಇ-ಮೇಲ್ ಮಾಡಲಾಗುತ್ತದೆ.
ಅಭ್ಯರ್ಥಿಗಳನ್ನು ಎರಡು ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ರೂ.12,000 ಅನ್ನು ಮೆಡಿಕಲ್ ಹಾಗೂ ಇತರೆ ಭತ್ಯೆಗಳಾಗಿ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 29-11-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 14-12-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |