ಆದೇಶ ಜಾರಿಕರ ಪಿಯೋನ್ ಹುದ್ದೆಗಳು – SSLC PUC ಪಾಸಾದವರಿಗೆ

ಹೊಸ ನೇಮಕಾತಿ ಅಧಿಸೂಚನೆ 2023

Belagavi District Court Recruitment 2023: ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕ
ಹುದ್ದೆಗಳ ಹೆಸರು: ಶೀಘ್ರಲಿಪಿಗಾರರು ಗ್ರೇಡ್ 3, ಆದೇಶ ಜಾರಿಕಾರರು, ಸಿಪಾಯಿ
ಒಟ್ಟು ಹುದ್ದೆಗಳು  ಒಟ್ಟು 68 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ 
ಶೀಘ್ರಲಿಪಿಗಾರರು ಗ್ರೇಡ್ 3 18 
ಆದೇಶ ಜಾರಿಕಾರರು 6 
ಸಿಪಾಯಿ 44 

ವಿದ್ಯಾರ್ಹತೆ:

ಶೀಘ್ರಲಿಪಿಗಾರರು – 1
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಮತ್ತು ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆದೇಶ ಜಾರಿಕಾರರು
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅಭ್ಯರ್ಥಿಯು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಲಘು ಹಾಗೂ ಭಾರಿ ವಾಹನ ಚಾಲನಾ ಪರವಾನಿಗೆ ಪತ್ರ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಸಿಪಾಯಿ
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅಭ್ಯರ್ಥಿಯು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ವಯೋಮಿತಿ:
ವಯೋಮಾನ : ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
• ಪ.ಜಾತಿ, ಪ.ಪಂ., ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ

ವೇತನಶ್ರೇಣಿ:
ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.17,000/- ರೂ.52650/- ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
 ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ಶೀಘ್ರಲಿಪಿಗಾರ ಹುದ್ದೆಗೆ ರೂ. 300, ಆದೇಶ ಜಾರಿಕಾರ ಹುದ್ದೆಗೆ ರೂ. 250, ಸಿಪಾಯಿ ಹುದ್ದೆಗೆ ರೂ. 200
*ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇರುತ್ತದೆ.

( ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.)

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಫೆಬ್ರವರಿ 02, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಮಾರ್ಚ್ 03, 2023
   

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!