SSLC ಪಾಸಾದವರಿಗೆ ಬೆಂಗಳೂರು ಕೋರ್ಟ್ ನಲ್ಲಿ ಸರ್ಕಾರಿ ಖಾಲಿ ಹುದ್ದೆಗಳು |

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಘಟಕದಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ 

Bengaluru City Civil Court Recruitment 2022 : ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಘಟಕದಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು: ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಘಟಕ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  133
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ಹುದ್ದೆಗಳ ಹೆಸರು ಮತ್ತು ಹುದ್ದೆಗಳ ಸಂಖ್ಯೆ 

ಹುದ್ದೆಗಳು  ಹುದ್ದೆಗಳ ಸಂಖ್ಯೆ 
ಶೀಘ್ರಲಿಪಿಗಾರ 17
ಬೆರಳಚ್ಚುಗಾರ 24
ಆದೇಶ ಜಾರಿಕಾರ 05
ಜವಾನ 87

 

 

ವಿದ್ಯಾರ್ಹತೆ:

  • ಶೀಘ್ರಲಿಪಿಗಾರರು ಹುದ್ದೆಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರ್ಯಾಕ್ಟೀಸ್ ಪರೀಕ್ಷೆ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು & ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರ್ಯಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • ಬೆರಳಚ್ಚುಗಾರರು ಹುದ್ದೆಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರ್ಯಾಕ್ಟೀಸ್ ಪರೀಕ್ಷೆ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರ್ಯಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • ಆದೇಶ ಜಾರಿಕಾರರು ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಾಹನ ಚಾಲನಾ ಪರವಾನಿಗೆ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
  • ಜವಾನ ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

 

 

ವೇತನಶ್ರೇಣಿ:

ಹುದ್ದೆಗಳು  ವೇತನ ಶ್ರೇಣಿ 
ಶೀಘ್ರಲಿಪಿಗಾರ 27650-52650
ಬೆರಳಚ್ಚುಗಾರ 21400-42000
ಆದೇಶ ಜಾರಿಕಾರ 19950-37900
ಜವಾನ 17000-28950

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 200
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:
ಶೀಘ್ರಲಿಪಿಗಾರ, ಬೆರಳಚ್ಚುಗಾರ ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಒಟ್ಟು ಅಂಕಗಳ ಶೇಕಡಾ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಆದೇಶ ಜಾರಿಕಾರ, ಜವಾನ ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡಾ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಏಪ್ರಿಲ್ 21, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಮೇ 20, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ ಮೇ 21, 2022
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
error: Content is protected !!