ಡಿಸಿಸಿ ಬ್ಯಾಂಕ್ ನೇಮಕಾತಿ 2022 : DCC Bank Recruitment 2022

ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ

Bagalkot DCC Bank Recruitment 2022 : ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ, ಬಾಗಲಕೋಟೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  110
ಅರ್ಜಿ ಸಲ್ಲಿಸುವ ಬಗೆ   

 

ಸಾಫ್ಟ್‌ವೇರ್ ಇಂಜಿನಿಯರ್ 01
ವೇತನ ಶ್ರೇಣಿ ರೂ.40900/–78200/-
ವಿದ್ಯಾರ್ಹತೆ: ಸಾಫ್ಟ್‌ವೇರ್ ಇಂಜಿನಿಯರ್ ಹುದ್ದೆಗೆ ಅಂಗೀಕೃತ ಎ.ಐ.ಸಿ.ಟಿ.ಇ ನಿಂದ ಪಡೆದ ಪದವಿ ಬಿ.ಇ (ಗಣಕ ವಿಜ್ಞಾನ), ಬಿಸಿಎ ಪದವಿ ಪಡೆದಿರಬೇಕು. ಜೊತೆಗೆ ಹುದ್ದೆಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.

 

 

ಸಿವಿಲ್ ಇಂಜಿನಿಯರ್ 01
ವೇತನ ಶ್ರೇಣಿ ರೂ.40900/–78200/-
ವಿದ್ಯಾರ್ಹತೆ: ಸಿವಿಲ್ ಇಂಜಿನಿಯರ್ ಹುದ್ದೆಗೆ ಅಂಗೀಕೃತ ಎ.ಐ.ಸಿ.ಟಿ.ಇ ನಿಂದ ಪಡೆದ ಪದವಿ ಬಿ.ಇ (ಸಿವಿಲ್) ಕನಿಷ್ಠ ಶೇ. 60% ಅಂಕಗಳೊಂದಿಗೆ ಪದವಿ ಪಡೆದಿರಬೇಕು. ಜೊತೆಗೆ ಹುದ್ದೆಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.

ಗಣಕಯಂತ್ರ ಸಂಯೋಜಕರು 02
ವೇತನ ಶ್ರೇಣಿ ರೂ.37900/-70850/-
ವಿದ್ಯಾರ್ಹತೆ: ಗಣಕಯಂತ್ರ ಸಂಯೋಜಕರು ಹುದ್ದೆಗೆ ಅಂಗೀಕೃತ ಎ.ಐ.ಸಿ.ಟಿ.ಇ ನಿಂದ ಪಡೆದ ಪದವಿ ಬಿ.ಇ/ಬಿ.ಟೆಕ್, ಕಂಪ್ಯೂಟರ್ ಸೈನ್ಸ್/ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್, ಬಿಸಿಎ, ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್) ಪದವಿ ಪಡೆದಿರಬೇಕು. ಜೊತೆಗೆ ಹುದ್ದೆಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.

ಪ್ರಥಮ ದರ್ಜೆ ಸಹಾಯಕರು 20
ವೇತನ ಶ್ರೇಣಿ ರೂ.37900/–70850/-
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಾಸಾಗಿರಬೇಕು. ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.

ದ್ವಿತೀಯ ದರ್ಜೆ ಸಹಾಯಕರು 30
ವೇತನ ಶ್ರೇಣಿ ರೂ.33450/–62600/-
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಾಸಾಗಿರಬೇಕು. ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.

ಸಿಪಾಯಿ 54
ವೇತನ ಶ್ರೇಣಿ ರೂ.27650/–52650/-
ವಿದ್ಯಾರ್ಹತೆ: ಸಿಪಾಯಿ ಹುದ್ದೆಗೆ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.

 

 

ವಾಹನ ಚಾಲಕರು 02
ವೇತನ ಶ್ರೇಣಿ ರೂ.27650/-52650/-
ವಿದ್ಯಾರ್ಹತೆ: ವಾಹನ ಚಾಲಕರು ಹುದ್ದೆಗೆ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು. ಜೊತೆಗೆ ವಾಹನ ಚಾಲನೆ ಪರವಾನಿಗೆಯೊಂದಿಗೆ 5 ವರ್ಷ ಅನುಭವ ಹೊಂದಿರಬೇಕು.

ವಯೋಮಿತಿ:
ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ,
ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ. 1000 ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ಅಂಗವಿಕಲ/ಮಾಜಿ ಸೈನಿಕ/ವಿಧವಾ ಅಭ್ಯರ್ಥಿಗಳು ರೂ. 500 ಪಾವತಿಸಬೇಕು

ಆಯ್ಕೆ ವಿಧಾನ 
ವಿದ್ಯಾರ್ಹತೆ ಹಾಗೂ ಅಗತ್ಯ ದಾಖಲೆಗಳ ಆಧಾರದ ಮೇಲೆ ಪರಿಶೀಲಿಸಿ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಗೆ ಕರೆಯಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆಯಲಾದ ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು.

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಮಾರ್ಚ್ 11, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಏಪ್ರಿಲ್ 04, 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
error: Content is protected !!