SDA ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – ವಿವಿಧ ಖಾಲಿ ಹುದ್ದೆಗಳ ಭರ್ತಿ

ಹೊಸ ನೇಮಕಾತಿ ಅಧಿಸೂಚನೆ 2023

ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಸಹಾಯಕ ಗ್ರಂಥಪಾಲಕ ಹುದ್ದೆಗಳ ಭರ್ತಿ  2023

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

The Bharat Co Operative Bank Limited Recruitment 2023 – ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿ ಜಯನಗರ ಬೆಂಗಳೂರು ಇಲ್ಲಿ ಖಾಲಿ ಇರುವ 22 ಹಿರಿಯ ವ್ಯವಸ್ಥಾಪಕರು, ಕಂಪ್ಯೂಟರ್ ಮ್ಯಾನೇಜರ್, ಅಕೌಂಟಂಟ್, ದ್ವಿತೀಯ ದರ್ಜೆ ಸಹಾಯಕರು ಮತ್ತು ಅಟೆಂಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿ – Bharat Co Operative Bank
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು  22
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ವಿವರ
ಮುಖ್ಯ ಕಾರ್ಯನಿರ್ವಹಣಾಧಿಕಾರಿ : 1
ಹಿರಿಯ ವ್ಯವಸ್ಥಾಪಕರು : 1
ಕಂಪ್ಯೂಟರ್ ಮ್ಯಾನೇಜರ್ (ಸಿಸ್ಟಂ ಅಡ್ಮಿನಿಸ್ಟ್ರೇಟರ್ ಮುಖ್ಯಸ್ಥ) : 1
ವ್ಯವಸ್ಥಾಪಕರು : 3
ಅಕೌಂಟೆಂಟ್ : 2
ಅಸಿಸ್ಟಂಟ್ ಅಕೌಂಟೆಂಟ್ : 2
ದ್ವಿತೀಯ ದರ್ಜೆ ಸಹಾಯಕರು : 2
ಅಟೆಂಡರ್ : 10

ವಿದ್ಯಾರ್ಹತೆ:
ಮುಖ್ಯ ಕಾರ್ಯನಿರ್ವಹಣಾಧಿಕಾರಿ / ಹಿರಿಯ ವ್ಯವಸ್ಥಾಪಕರು/ ಕಂಪ್ಯೂಟರ್ ಮ್ಯಾನೇಜರ್ / ವ್ಯವಸ್ಥಾಪಕರು / ಅಕೌಂಟೆಂಟ್ / ಅಸಿಸ್ಟಂಟ್ ಅಕೌಂಟೆಂಟ್ ಹುದ್ದೆಗಳಿಗೆ ಪದವಿ ಪಾಸ್ ಮಾಡಿರಬೇಕು. ಜತೆಗೆ ಕಂಪ್ಯೂಟರ್ ಜ್ಞಾನ ಇರಬೇಕು.
– ದ್ವಿತೀಯ ದರ್ಜೆ ಸಹಾಯಕರು ಹುದ್ದೆಗೆ ಪಿಯುಸಿ ತೇರ್ಗಡೆ ಹಾಗೂ ಕಂಪ್ಯೂಟರ್ ಬಳಕೆ ಅರಿವು.
– ಅಟೆಂಡರ್ ಹುದ್ದೆಗೆ ಎಸ್‌ಎಸ್‌ಎಲ್‌ಸಿ ಪಾಸ್, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

ಉದ್ಯೋಗ ಸುದ್ದಿ – ಅರಣ್ಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿ 2023

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕಾಗುತ್ತದೆ.
ಒಬಿಸಿ ಅಭ್ಯರ್ಥಿಗಳಿಗೆ : 38 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ : 40 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ24,000-56,550/- ರೂಗಳವರೆಗೆ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಸಾಮಾನ್ಯ ಕೆಟಗರಿ ಅಭ್ಯರ್ಥಿಗಳಿಗೆ ರೂ.1000.
ಎಸ್‌ಸಿ / ಎಸ್‌ಟಿ / ಇತರೆ ಹಿಂದುಳಿದ ವರ್ಗದವರಿಗೆ ರೂ.500.
ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ದಿ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಹೆಸರಿಗೆ ಡಿಡಿ / ಪೋಸ್ಟಲ್‌ ಆರ್ಡರ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ :
ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿ.,
ನಂ.30, 15ನೇ ಕ್ರಾಸ್, 3ನೇ ಬ್ಲಾಕ್,
ಜಯನಗರ ಬೆಂಗಳೂರು-560011.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  11 ಜನವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  27 ಜನವರಿ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!