ಬೀದರ್ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ 21 ಖಾಲಿ ಇರುವ ಹಿಂಬಾಕಿ ಹುದ್ದೆಗಳಾದ ಸ್ಟೆನೋಗ್ರಾಫರ್ ಗ್ರೇಡ್ III ಮತ್ತು ಟೈಪಿಸ್ಟ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು
ಹುದ್ದೆಗಳ ವಿವರ
1. ಸ್ಟೆನೋಗ್ರಾಫರ್ ಗ್ರೇಡ್ III – 12
2. ಟೈಪಿಸ್ಟ್ – 09
ಒಟ್ಟು ಹುದ್ದೆಗಳು: 21
ಉದ್ಯೋಗ ಸ್ಥಳ: ಬೀದರ್
ಶೈಕ್ಷಣಿಕ ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
ಗರಿಷ್ಟ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ
2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ- 1 ರ ಅಭ್ಯರ್ಥಿಗಳಿಗೆ : 40 ವರ್ಷ
ವೇತನ ಶ್ರೇಣಿ:
ಸ್ಟೆನೋಗ್ರಾಫರ್ ಗ್ರೇಡ್ III ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 27650/- ವೇತನ ಹಾಗೂ ಟೈಪಿಸ್ಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 21400/- ವೇತನ ಇತರೆ ಭತ್ಯೆಗಳನ್ನು ಪಡೆಯುವರು.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 200/-
ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 200/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ. 100/- ಅರ್ಜಿ ಶುಲ್ಕ ಇರುತ್ತದೆ.
ಆಯ್ಕೆ ವಿಧಾನ:
ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರ ಹುದ್ದೆಗಳ) (ತಿದ್ದುಪಡಿ) ನೇಮಕಾತಿ ನಿಯಮಗಳು 2007 ರ ಪ್ರಕಾರ ನೇಮಕಾತಿಯನ್ನು ನಡೆಸಲಾಗುವುದು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13 ಸೆಪ್ಟೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 9 ಅಕ್ಟೋಬರ್ 2021
Notification |
Apply Online for Stenographer |
Apply Online for Typist |