SSLC, PUC ಪಾಸಾದವರಿಗೆ ಕೋರ್ಟ್ ನಲ್ಲಿ ವಿವಿಧ ಖಾಲಿ ಹುದ್ದೆಗಳು

ಬೀದರ್ ಜಿಲ್ಲಾ ನ್ಯಾಯಾಲಯದಲ್ಲಿ ಹೊಸ ನೇಮಕಾತಿ ಅಧಿಸೂಚನೆ 2022

Bidar District Court Recruitment 2022: ಬೀದರ್ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಬೀದರ್ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು  32
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಹುದ್ದೆಗಳ ಹೆಸರು  ಹುದ್ದೆಗಳ ಸಂಖ್ಯೆ  ವೇತನಶ್ರೇಣಿ 
ಬೆರಳಚ್ಚು ನಕಲುಗಾರರು 03 21400-42000
ಆದೇಶ ಜಾರಿಕಾರರು 14 19950-37900
ಜವಾನರು ಹುದ್ದೆಗೆ 15 17000-28950

ವಿದ್ಯಾರ್ಹತೆ:
ಬೆರಳಚ್ಚು ನಕಲುಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಕಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಆದೇಶ ಜಾರಿಕಾರರು ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.ವಾಹನ ಚಾಲನಾ ಪರವಾನಿಗೆ ಇರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಜವಾನರು ಹುದ್ದೆಗೆ 10ನೇ ತರಗತಿಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ರೈಲ್ವೆ ಉದ್ಯೋಗಾವಕಾಶ: ಹುಬ್ಬಳ್ಳಿ ರೈಲ್ವೆ ನೇಮಕಾತಿ ಅಧಿಸೂಚನೆ 2022

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. 
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 200
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳು ರೂ. 100
( ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ :
ಬೆರಳಚ್ಚು ನಕಲುಗಾರರು ಹುದ್ದೆಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಯಂತ್ರ/ ಕಂಪ್ಯೂಟರ್ ಮುಖಾಂತರ ಬೆರಳಚ್ಚು ಮಾಡುವ ಸಾಮರ್ಥ್ಯ/ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಆದೇಶ ಜಾರಿಕಾರ, ಜವಾನ ಹುದ್ದೆಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜೂನ್ 13, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಜುಲೈ 12, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ  ಜುಲೈ 14, 2022
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
error: Content is protected !!