ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೀದರ್ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06 ಫೆಬ್ರವರಿ 2021 ಆಗಿರುತ್ತದೆ.
ಉದ್ಯೋಗ ಸ್ಥಳ: ಬೀದರ್ ಜಿಲ್ಲೆ
ಒಟ್ಟು ಹುದ್ದೆಗಳು: 238
ಅಂಗನವಾಡಿ ಕಾರ್ಯಕರ್ತೆ – 77
ಅಂಗನವಾಡಿ ಸಹಾಯಕಿ – 161
ವಿದ್ಯಾರ್ಹತೆ
ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ.( 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)
ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ವಿಧಾನ: ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 05 ಜನವರಿ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 06 ಫೆಬ್ರವರಿ 2021
ವೆಬ್ಸೈಟ್ |
ನೋಟಿಫಿಕೇಶನ್ |
10th pass jobs, Degree jobs, latest job news Karnataka, ITI Jobs, KPSC, Railway jobs,