ಬೀದರ್ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೇಮಕಾತಿ 2021 – WCD Bidar Recruitment 2021 – Apply Online for 238 Anganwadi Worker & Helper Posts

Telegram Group

 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೀದರ್  ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 06 ಫೆಬ್ರವರಿ 2021  ಆಗಿರುತ್ತದೆ.

ಉದ್ಯೋಗ ಸ್ಥಳ: ಬೀದರ್ ಜಿಲ್ಲೆ 

ಒಟ್ಟು ಹುದ್ದೆಗಳು:  238

ಅಂಗನವಾಡಿ ಕಾರ್ಯಕರ್ತೆ – 77

ಅಂಗನವಾಡಿ ಸಹಾಯಕಿ – 161

 

 

ವಿದ್ಯಾರ್ಹತೆ

ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ.( 9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)

ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.

ವಯೋಮಿತಿ: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ವಿಧಾನ: ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವ‍ರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

 

 

ಪ್ರಮುಖ ದಿನಾಂಕಗಳು 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 05 ಜನವರಿ 2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 06 ಫೆಬ್ರವರಿ  2021

 

ವೆಬ್ಸೈಟ್
ನೋಟಿಫಿಕೇಶನ್

10th pass jobs, Degree jobs, latest job news Karnataka, ITI Jobs, KPSC, Railway jobs, 

 

Telegram Group
error: Content is protected !!