ಬೆಂಗಳೂರು ಮಹಾನಗರ ಸಾರಿಗೆ ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2022
BMTC Recruitment 2022: ಬೆಂಗಳೂರು ಮಹಾನಗರ ಸಾರಿಗೆ ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸಾಫ್ಟ್‌ವೇರ್ ಇಂಜಿನಿಯರ್, ಸಿಸ್ಟಮ್ ಅಡ್ಮಿನಿಸ್ಟ್ರೇಟರ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬೆಂಗಳೂರು ಮಹಾನಗರ ಸಾರಿಗೆ ನಿಗಮ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | ತಿಳಿಸಿಲ್ಲ |
ಅರ್ಜಿ ಸಲ್ಲಿಸುವ ಬಗೆ | ಇ-ಮೇಲ್ ಮುಖಾಂತರ |
ವಿದ್ಯಾರ್ಹತೆ:
ಸಾಫ್ಟ್‌ವೇರ್ ಇಂಜಿನಿಯರ್ ಹುದ್ದೆಗಳಿಗೆ ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್ನಲ್ಲಿ ಬಿಎಸ್ಸಿ, ಬಿಇ, ಬಿಟೆಕ್, ಎಂಸಿಎ, ಬಿಸಿಎ ಮುಗಿಸಿರಬೇಕು.
ಸಿಸ್ಟಮ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳಿಗೆ ಅಭ್ಯರ್ಥಿಗಳು ಬಿಇ, ಬಿಟೆಕ್, ಎಂಸಿಎ, ಬಿಸಿಎ ಅಥವಾ ಡಿಪ್ಲೊಮಾ ಮುಗಿಸಿರಬೇಕು.
ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್ ಹುದ್ದೆಗಳಿಗೆ ಅಭ್ಯರ್ಥಿಗಳು ಬಿಇ, ಬಿಟೆಕ್ ಎಂಸಿಎ ಮುಗಿಸಿರಬೇಕು.
ವಯೋಮಿತಿ:
ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನೇಮಕಾತಿ ಅಧಿಸೂಚನೆಯ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.
ಅನುಭವ:
ಸಾಫ್ಟ್‌ವೇರ್ ಇಂಜಿನಿಯರ್ ಮತ್ತು ಸಿಸ್ಟಮ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳಿಗೆ ಫ್ರೆಶರ್ಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ.
ಸೀನಿಯರ್ ಸಾಫ್ಟ್‌ವೇರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎರಡು ವರ್ಷ ಸಂಬಂಧಿತ ಕ್ಷೇತ್ರದಲ್ಲಿ ಸೇವಾ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಸುವ ಇಮೇಲ್ ವಿಳಾಸ: systemsupervisor@mybmtc.com
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಜೂನ್ 23, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 08 ಜುಲೈ 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |