ಬ್ಯಾಂಕ್ ಆಫ್ ಬರೋಡಾ ದಲ್ಲಿ 325 ವಿವಿಧ ಹುದ್ದೆಗಳ ಭರ್ತಿ 2022
ಬ್ಯಾಂಕ್ ಆಫ್ ಬರೋಡಾ (BOB) ದಲ್ಲಿ ಖಾಲಿ ಇರುವ 325 ಕ್ರೆಡಿಟ್ ಎನಾಲಿಸ್ಟ್, ರಿಲೇಷನ್ಶಿಪ್ ಮ್ಯಾನೇಜರ್, ಸೇರಿದಂತ್ತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಬ್ಯಾಂಕ್ ಆಫ್ ಬರೋಡಾ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 325 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಸಂಬಂಧ ನಿರ್ವಾಹಕ: 75 ಹುದ್ದೆಗಳು |
* ಕಾರ್ಪೊರೇಟ್ ಮತ್ತು ಇನ್ಸ್ಟ್. ಕ್ರೆಡಿಟ್: 100 ಹುದ್ದೆಗಳು |
* ಕ್ರೆಡಿಟ್ ವಿಶ್ಲೇಷಕ: 100 ಹುದ್ದೆಗಳು |
* ಕಾರ್ಪೊರೇಟ್ ಮತ್ತು ಇನ್ಸ್ಟ್. ಕ್ರೆಡಿಟ್: 50 ಹುದ್ದೆಗಳು |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ/ ಡಿಪ್ಲೊಮಾ/ ಸಿಎ/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 28 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ
– ಎಸ್ಸಿ ಎಸ್ಟಿ ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳ ವಯೋಮಿತಿಯ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಅನುಭವದ 48,70/- ರಿಂದ 89,890/- ಆಧಾರದ ಮೇಲೆ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು
ಸಾಮಾನ್ಯ ಮತ್ತು OBC ವರ್ಗದ ಅಭ್ಯರ್ಥಿಗಳು ರೂ. 600/- ಅರ್ಜಿ ಶುಲ್ಕ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಅಂಗವಿಕಲ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳು ರೂ. 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 22 ಜೂನ್ 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 12 ಜುಲೈ 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |