ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2022
BOI Recruitment 2022: ಭಾರತೀಯ ರಾಷ್ಟ್ರೀಕೃತ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 696 ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ಬ್ಯಾಂಕ್ ಆಫ್ ಇಂಡಿಯಾ |
ಹುದ್ದೆಗಳ ಹೆಸರು: | ಅಧಿಕಾರಿ ಹುದ್ದೆಗಳನ್ನು ಭರ್ತಿ |
ಒಟ್ಟು ಹುದ್ದೆಗಳು | 696 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ
ಕಾಯಂ ಹುದ್ದೆಗಳು | 594 |
ಗುತ್ತಿಗೆ ಹುದ್ದೆಗಳು | 102 |
ಒಟ್ಟು ಹುದ್ದೆಗಳು | 696 |
ವಿದ್ಯಾರ್ಹತೆ:
ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ / ಬಿ.ಎಸ್ಸಿ / ಬಿಇ / ಬಿ.ಟೆಕ್ /ಸಿಎ/ ಪಿಜಿಡಿಎಮ್ / ಎಂಬಿಎ/ ಎಂಸಿಎ / ಎಂಎಸ್ಸಿ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಟ 28 ವರ್ಷ ಮತ್ತು ಗರಿಷ್ಠ 38 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನಶ್ರೇಣಿ:
ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 36,000/- ರಿಂದ 89,890/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 850/-
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ. 175/- ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಆಯ್ಕೆ ವಿಧಾನ
ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಆನ್ಲೈನ್ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 26.04.2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 10.05.2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |