BPL ಕಾರ್ಡ್ ಇದ್ದವರಿಗೆ ಇಲ್ಲಿದೆ ಒಂದು ಗುಡ್ ನ್ಯೂಸ್: BPL Card Latest Update

Telegram Group

 

ಉದ್ಯೋಗಿನಿ ಯೋಜನೆಯಡಿ 2020-21 ಮತ್ತು 2021-22ನೇ ಸಾಲಿನಲ್ಲಿ ಕೊಡಗು ಜಿಲ್ಲೆಗೆ ಪ.ಜಾ ಮತ್ತು ಪ.ಪಂ.ದ ಉಪಯೋಜನೆಯಡಿ ಉಳಿಕೆ ಅನುದಾನದಡಿ ನಿಗದಿಪಡಿಸಿದ ಗುರಿ ಸಾಧನೆ ಮಾಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆದು ಕೃಷಿ, ಹಾಗೂ ಕೃಷಿಯೇತರ ಚಟುವಟಿಕೆಗಳ(ಹಂದಿ ಸಾಕಾಣಿಕೆ, ಆಡು ಸಾಕಾಣಿಕೆ, ಕೋಳಿ ಸಾಕಾಣಿಕೆ, ನರ್ಸರಿ, ಬ್ಯೂಟಿಪಾರ್ಲರ್, ಟೈಲರಿಂಗ್, ವ್ಯಾಪಾರ, ಇತ್ಯಾದಿಗಳಿಗೆ) ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು 18 ರಿಂದ 55 ವರ್ಷ ವಯೋಮಿತಿಗೊಳಪಟ್ಟು ಬಡತನ ರೇಖೆಯ ಒಳಪಡುವ ಪಡಿತರ ಚೀಟಿ ಹೊಂದಿದ ಮಹಿಳೆಯರಿಗೆ ಅವಕಾಶವಿರುತ್ತದೆ.

18 ರಿಂದ 55 ವರ್ಷದೊಳಗಿನ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ, ಪಂಗಡದ ಮಹಿಳೆಯರಿಗೆ ಘಟಕ ವೆಚ್ಚ 1 ಲಕ್ಷ ರೂ. ನಿಂದ 3 ಲಕ್ಷ ರೂ. ಹಾಗೂ ಶೇ.50 ಸಹಾಯಧನ ನೀಡಲಾಗುವುದು ಮತ್ತು ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂ. ಮೀರಬಾರದು. ಜಾತಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ, ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಬಿಪಿಎಲ್ ಕಾರ್ಡ್, ಪಾಸ್ ಪೋರ್ಟ್ ಸೈಜ್ ಪೋಟೋ ಸಲ್ಲಿಸಬೇಕು.

 

 

ಜಿಲ್ಲಾ ವ್ಯವಸ್ಥಾಪಕರ ಕಚೇರಿ/ಉಪನಿರ್ದೇಶಕರ ಕಚೇರಿಯಲ್ಲಿ ಉದ್ಯೋಗಿನಿ ಯೋಜನೆಯ ಅರ್ಜಿಗಳು ಲಭ್ಯವಿದ್ದು, ಅರ್ಹ ಮಹಿಳೆಯರು ಈ ಕಚೇರಿಗಳಿಂದ ಅರ್ಜಿ ಪಡೆದು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಡಿಸೆಂಬರ್ 15 ರೊಳಗೆ ಸಲ್ಲಿಸಬಹುದು. ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಆಸಕ್ತಿ ಇರುವ ಮಹಿಳೆಯರು ಜಿಲ್ಲಾ ಕಚೇರಿ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ ಗೇಟ್, ಮೈಸೂರು ರಸ್ತೆ, ಮಡಿಕೇರಿ ದೂ.ಸಂ.9980632352 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Telegram Group
error: Content is protected !!