ಪಡಿತರ ಚೀಟಿದಾರರಿಗೆ ಇಲ್ಲಿದೆ ಮತ್ತೊಂದು ಸಿಹಿ ಸುದ್ದಿ

ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ರಾಜ್ಯದ ಬಿಪಿಎಲ್ ಕಾರ್ಡ್ ದಾರರಿಗೆ ಉಚಿತವಾಗಿ 5 ಕೆಜಿ ಅಕ್ಕಿ ನೀಡಲಾಗುತ್ತದೆ ಎಂಬುದಾಗಿ ಘೋಷಿಸಿದ್ದಂತ ರಾಜ್ಯ ಸರ್ಕಾರ, ಇದೀಗ ಮತ್ತೆ ಪರಿಷ್ಕರಣೆ ಮಾಡಿದ್ದು, ಅಕ್ಕಿಯ ಪ್ರಮಾಣವನ್ನು 5 ರಿಂದ 10 ಕೆಜಿಗೆ ಏರಿಕೆ ಮಾಡಿದೆ. ಈ ಮೂಲಕ, ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ ನೀಡಿದೆ.

 

 

ಈ ಕುರಿತಂತೆ ಸಚಿವ ಉಮೇಶ್ ಕತ್ತಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ರಾಜ್ಯದ್ಲಲಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದು, ಇಲಾಖೆಯಿಂದ ಪಡಿತರ ಚೀಟಿಯನ್ನು ವಿತರಿಸಲು ಪರಿಶೀಲನೆ ಹಂತದಲ್ಲಿ ಇದ್ದಲ್ಲಿ ಅಂತಹವರಿಗೆ ಮೇ ಮತ್ತು ಜೂನ್ ತಿಂಗಳಿಗೆ ಪ್ರತಿ ಮಾಹೆಗೆ ಉಚಿತವಾಗಿ 10 ಕೆಜಿ ಬಿಪಿಎಲ್ ಅರ್ಜಿದಾರರಿಗೆ ಮತ್ತು 10 ಕೆಜಿ (ಪ್ರತಿ ಕೆಜಿಗೆ ರೂ.15ರಂತೆ ಸಬ್ಸಿಡಿ ದರದಲ್ಲಿ) ಎಪಿಎಲ್ ಅರ್ಜಿದಾರರಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ

ಪ್ರಧಾನ ಮಂತ್ರಿ ಗರೀಬ್ ಅನ್ನ ಯೋಜನೆಯ ಮೇ ಮತ್ತು ಜೂನ್ ತಿಂಗಳಿಗೆ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳಿಗೆ ರಾಜ್ಯದಿಂದ ನಿಡಲಾಗುತ್ತಿರುವ 5 ಕೆಜಿ ಆಹಾರ ಧಾನ್ಯದ ಜೊತೆಗೆ 5 ಕೆಜಿ ಅಕ್ಕಿ ಸೇರಿಸಿ ಒಟ್ಟು 10 ಕೆಜಿ ಆಹಾರ ಧಾನ್ಯ ಹಾಗೂ ಪ್ರತಿ ಪಡಿತರ ಚೀಟಿಗೆ 2 ಕೆಜಿ ಗೋದಿ ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿರುವವರಿಗೆ ಪ್ರತಿ ಪಡಿತರ ಚೀಟಿಗೆ 35 ಕೆಜಿ ಆಹಾರ ಧಾನ್ಯದ ಜೊತೆಗೆ 5 ಕೆಜಿ ಅಕ್ಕಿ ಸೇರಿಸಿ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ.

 

error: Content is protected !!