ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 2022
BSCL Recruitment 2022 | (Belagavi Smart City Limited) ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ TULIP (The Urban Learning Internship Program) ಕಾರ್ಯಕ್ರಮದಡಿ ಕಾರ್ಯನಿರ್ವಹಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 18-01-2022 ರೊಳಗೆ ಅರ್ಜಿ ಸಲ್ಲಿಸುವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
- ಸಿವಿಲ್ ಇಂಜಿನಿಯರಿಂಗ್ 08 ಹುದ್ದೆಗಳು
- ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ 02 ಹುದ್ದೆಗಳು
ಈ ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಒಟ್ಟು 10 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇಂಟರ್ನ್ ಶಿಪ್ ಅವಧಿಯು 3 ತಿಂಗಳವರೆಗೆ ಮಾತ್ರ ಇರುತ್ತದೆ,ಸದರಿ ಅವಧಿಯನ್ನು ನಿರ್ಧರಿಸುವ ಹಕ್ಕು ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ಗೆ ಇರುತ್ತದೆ.
ಹೆಚ್ಚಿನ ವಿವರಗಳಿಗಾಗಿ ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಅಧಿಕೃತ ಜಾಲತಾಣವಾದ www.bscl.in ನಲ್ಲಿ ಮಾಹಿತಿ ಪಡೆದು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ತಮ್ಮ ಸ್ವ ವಿವರ ಮತ್ತು ದಾಖಲೆಗಳೊಂದಿಗೆ ಅರ್ಜಿಯನ್ನು ದಿನಾಂಕ 18-01-2022 ರ ಸಂಜೆ 5.30 ರೊಳಗೆ ಸಲ್ಲಿಸಬಹುದಾಗಿದೆ.
OFFICIAL WEBSITE |
DOWNLOAD OFFICIAL NOTIFICATION PDF |