ಅಸಿಸ್ಟಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ – ಸಂಬಳ: ರೂ.27650-52650 ರೂ

 

CAMPCO Recruitment 2022: ಕ್ಯಾಂಪ್ಕೋ ಎಂದೇ ಪ್ರಸಿದ್ದಿಯಾಗಿರುವ ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್
ಹುದ್ದೆಗಳ ಹೆಸರು: ಸಹಾಯಕ ಗುಣಮಟ್ಟದ ಭರವಸೆ ಮೇಲ್ವಿಚಾರಕರು, ಸಹಾಯಕ ಉತ್ಪಾದನಾ ಮೇಲ್ವಿಚಾರಕರು
ಒಟ್ಟು ಹುದ್ದೆಗಳು  5
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 
ಉದ್ಯೋಗ ಸ್ಥಳ  ಮಂಗಳೂರು 

 

ವಿದ್ಯಾರ್ಹತೆ:
ಕ್ಯಾಂಪ್ಕೋ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ರಸಾಯನಶಾಸ್ತ್ರ/ಆಹಾರ ವಿಜ್ಞಾನ/ಬಯೋ ಟೆಕ್ನಾಲಜಿಯಲ್ಲಿ ಬಿ.ಎಸ್ಸಿ, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 32 ವರ್ಷ ಮೀರಿರಬಾರದು.

ವಯಸ್ಸಿನ ಸಡಿಲಿಕೆ:
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳು: 03 ವರ್ಷಗಳು

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.27650-52650 ರೂ ಪ್ರತಿ ತಿಂಗಳು

ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು: 295 ರೂ
ಎಲ್ಲಾ ಇತರ ಅಭ್ಯರ್ಥಿಗಳು: 590 ರೂ

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:
ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜೂನ್​ 6, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಜೂನ್ 30, 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

error: Content is protected !!