ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

4500 ಹೊಸ ಅರ್ಜಿ ಅಹ್ವಾನ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025 — 4500 ಅಪ್ರೆಂಟಿಸ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ತನ್ನ 2025 ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಭಾರತಾದ್ಯಂತ 4500 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಬ್ಯಾಂಕ್ ಉದ್ಯೋಗಕ್ಕೆ ಆಸಕ್ತರಾದ ಅಭ್ಯರ್ಥಿಗಳಿಗೆ ಇದು ಅತಿ ಉತ್ತಮ ಅವಕಾಶವಾಗಿದ್ದು, ತಮ್ಮ ವಿದ್ಯಾರ್ಹತೆ ಹಾಗೂ ಆಸಕ್ತಿಯಂತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025

ನೇಮಕಾತಿ ವಿವರಗಳು
ಸಂಸ್ಥೆ ಹೆಸರು: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಒಟ್ಟು ಹುದ್ದೆಗಳ ಸಂಖ್ಯೆ: 4500
ಹುದ್ದೆಗಳ ಹೆಸರು: ಅಪ್ರೆಂಟಿಸ್
ಉದ್ಯೋಗ ಸ್ಥಳ: ಭಾರತಾದ್ಯಂತ
ಹುದ್ದೆಗಳ ಪ್ರಕಾರ: ಬ್ಯಾಂಕಿನ ವಿವಿಧ ಶಾಖೆಗಳಲ್ಲಿ ತರಬೇತಿ ಪಡೆದ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ.

ವೇತನ ಶ್ರೇಣಿ
ಅಭ್ಯರ್ಥಿಗಳಿಗೆ ಮಾಸಿಕ ವೇತನ:
₹15,000/- ರೂ ಗಳವರೆಗೆ ನಿಗದಿಪಡಿಸಲಾಗಿದ್ದು, ಬ್ಯಾಂಕಿನ ನಿಯಮಾವಳಿಯಂತೆ ಪಡೆಯಲಾಗುತ್ತದೆ.

ವಿದ್ಯಾರ್ಹತೆಗಳು
ಶೈಕ್ಷಣಿಕ ಅರ್ಹತೆ: ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪೂರ್ಣಗೊಳಿಸಿರಬೇಕು. ಯಾವುದೇ ವಿಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ (07-06-2025ರ ತನಕ)
ಕನಿಷ್ಠ: 20 ವರ್ಷ
ಗರಿಷ್ಠ: 28 ವರ್ಷ

ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷ
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ: 05 ವರ್ಷ
ವಿಕಲಚೇತನ ಅಭ್ಯರ್ಥಿಗಳಿಗೆ:
ಯುಆರ್: 10 ವರ್ಷ
ಒಬಿಸಿ: 13 ವರ್ಷ
ಎಸ್ಸಿ/ಎಸ್ಟಿ: 15 ವರ್ಷ

ಅರ್ಜಿ ಶುಲ್ಕ
ವಿಕಲಚೇತನ ಅಭ್ಯರ್ಥಿಗಳು: ₹400/-
ಎಸ್ಸಿ/ಎಸ್ಟಿ/ಮಹಿಳಾ/EWS ಅಭ್ಯರ್ಥಿಗಳು: ₹600/-
ಇತರೆ ಅಭ್ಯರ್ಥಿಗಳು: ₹800/-
ಪಾವತಿ ವಿಧಾನ: ಆನ್‌ಲೈನ್ ಮೂಲಕ ಪಾವತಿ ಮಾಡಲು ಅವಕಾಶವಿದೆ.

ಆಯ್ಕೆ ವಿಧಾನ
– ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತದೆ:
– ಆನ್‌ಲೈನ್ ಪರೀಕ್ಷೆ: ಬ್ಯಾಂಕಿಂಗ್ ಜ್ಞಾನ, ಸಾಮಾನ್ಯ ಅರಿವು, ಸಂಖ್ಯಾತ್ಮಕ ನಿರ್ಣಯ, ಅಂಕಗಣಿತ, ಇಂಗ್ಲೀಷ್ ಸೇರಿದಂತೆ ವಿಷಯಗಳನ್ನು ಒಳಗೊಂಡಂತೆ ಪರೀಕ್ಷೆ ನಡೆಸಲಾಗುತ್ತದೆ.
– ಸ್ಥಳೀಯ ಭಾಷಾ ಪರೀಕ್ಷೆ: ಅಭ್ಯರ್ಥಿಗಳು ಆಯ್ಕೆ ಮಾಡಿದ ರಾಜ್ಯದ ಪ್ರಕಾರ ಸ್ಥಳೀಯ ಭಾಷೆಯಲ್ಲಿ ನೈಪುಣ್ಯದ ಪರೀಕ್ಷೆ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ
ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
ಅರ್ಜಿ ಸಲ್ಲಿಸಲು ಮೊದಲು ನಿಮ್ಮ ಇಮೇಲ್ ಐಡಿ, ಮೊಬೈಲ್ ನಂಬರ್, ಶೈಕ್ಷಣಿಕ ದಾಖಲೆಗಳನ್ನು ಸಿದ್ಧಪಡಿಸಿ.
ಆನ್‌ಲೈನ್ ಅರ್ಜಿ ಸಲ್ಲಿಕೆ ಲಿಂಕ್‌ನಲ್ಲಿ ಅರ್ಜಿ ನಮೂನೆ ಭರ್ತಿ ಮಾಡಿ.
ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ ಹಾಗೂ ಫೋಟೋ ಸೈನ್ ಮಾಡಿ.
ಅರ್ಜಿ ಶುಲ್ಕವನ್ನು ಪಾವತಿಸಿ.
ಅರ್ಜಿ ಸಲ್ಲಿಸಿ ಮತ್ತು ನಿಮ್ಮ ಅಪ್ಲಿಕೇಶನ್ ಸಂಖ್ಯೆಯನ್ನು ಉಳಿಸಿಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು
ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 07-ಜೂನ್-2025
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 23-ಜೂನ್-2025
ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ: 25-ಜೂನ್-2025
ಆನ್‌ಲೈನ್ ಪರೀಕ್ಷೆ (ಅಂದಾಜು): 03-ಜುಲೈ-2025

ಪ್ರಮುಖ ಲಿಂಕುಗಳು
ನೋಟಿಫಿಕೇಶನ್ (ಅಧಿಸೂಚನೆ): ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಗುಂಪಿಗೆ ಸೇರಿಕೊಳ್ಳಿ: ಇಲ್ಲಿ ಕ್ಲಿಕ್ ಮಾಡಿ
ನಮ್ಮ ಯೂಟ್ಯೂಬ್ ಚಾನೆಲ್ ನೋಡಿ: ಇಲ್ಲಿ ಕ್ಲಿಕ್ ಮಾಡಿ

4500 ಹೊಸ ಅರ್ಜಿ ಅಹ್ವಾನ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025

close button