ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2022 : ನೇರ ನೇಮಕಾತಿ

 

Chamarajanagara RDPR Senior Analyst Job Notification 2022: ಕಾರ್ಯಪಾಲಕ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಚಾಮರಾಜನಗರ ವಿಭಾಗ ರವರಿಂದ ಚಾಮರಾಜನಗರ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗಾಗಿ ಜಿಲ್ಲಾ ಪ್ರಯೋಗಾಲಯಕ್ಕೆ ಹಿರಿಯ ವಿಶ್ಲೇಷಕ ಹುದ್ದೆ ನೇಮಕ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಯನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ಹುದ್ದೆಗಳ ಹೆಸರು:ಹಿರಿಯ ವಿಶ್ಲೇಷಕ

 

ವಿದ್ಯಾರ್ಹತೆ:
ಎಂಎಸ್ಸಿ ಇನ್ ಕೆಮಿಸ್ಟ್ರಿ / ಬಯೋಕೆಮಿಸ್ಟ್ರಿ / ಮೈಕ್ರೋಬಯೋಲಜಿ / ಎನ್ವಿರಾನ್ಮೆಂಟಲ್ ಸೈನ್ಸ್‌ / ಬಯೋಟೆಕ್ನಾಲಜಿ / ಬಿಇ ಇನ್ ಎನ್ವಿರಾನ್ಮೆಂಟಲ್ ಅನ್ನು ಕನಿಷ್ಠ ಶೇಕಡ.60 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ನೀರಿನ ಗುಣಮಟ್ಟ ಪರೀಕ್ಷಕರ ಹುದ್ದೆ ಕಾರ್ಯಾನುಭವ ಇರುವವರಿಗೆ ಶೇಕಡ.50 ಅಂಕಗಳನ್ನು ಗಳಿಸಿದ್ದರೂ ಸಹ ಹುದ್ದೆಗೆ ಆಧ್ಯತೆ ನೀಡಲಾಗುತ್ತದೆ.

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯಸ್ಸಿನ ಮಿತಿ 25 ವರ್ಷ, ಗರಿಷ್ಠ ವಯಸ್ಸಿನ ಮಿತಿ 45 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ 

ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತರು ತಮ್ಮ ವಿದ್ಯಾರ್ಹತೆ, ಕಾರ್ಯಾನುಭವ ದಾಖಲೆಗಳೊಂದಿಗೆ ಲೇಟೆಸ್ಟ್‌ ಬಯೋಡಾಟಾವನ್ನು ಈ ಕೆಳಗಿನ ವಿಭಾಗ ಕಚೇರಿಗೆ ಸಲ್ಲಿಸಬೇಕು.

ಅನುಭವ:
3 ವರ್ಷ ನೀರಿನ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯದಲ್ಲಿ ಸೇವೆ ಸಲ್ಲಿಸಿರಬೇಕು. ಹಾಗೂ ಎನ್‌ಎಬಿಎಲ್ ಪ್ರಮಾಣ ಪತ್ರ ಪಡೆದಿರುವ ಪ್ರಯೋಗಾಲಯದಲ್ಲಿ ಸೇವೆ ಸಲ್ಲಿಸಿದವರಿಗೆ ಮೊದಲ ಆಧ್ಯತೆ ಮತ್ತು ಎಂಎಸ್‌ ಆಫೀಸ್ ಬಳಕೆ ಮಾಡುವ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಅರ್ಜಿ ವಿಳಾಸ :
ಕಾರ್ಯಪಾಲಕ ಇಂಜಿನಿಯರ್‌ರವರ ಕಛೇರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ನ್ಯಾಯಾಲಯದ ರಸ್ತೆ, ಚಾಮರಾಜನಗರ ವಿಭಾಗ, ಚಾಮರಾಜನಗರ – 571313

ದೂರವಾಣಿ ಸಂಖ್ಯೆ : 08226 – 226054
ಇ-ಮೇಲ್ ವಿಳಾಸ : eerdwsd,chn@gmail.com

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್
ವಿದ್ಯಾರ್ಹತೆ ದಾಖಲೆಗಳು
ಕಾರ್ಯಾನುಭವ ದಾಖಲೆಗಳು
ಜನ್ಮ ದಿನಾಂಕ ದಾಖಲೆ ಅಥವಾ
ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
ಇತರೆ.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 06-08-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 17-08-2022
  

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button