ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕ ವಿವಿಧ ಖಾಲಿ ಹುದ್ದೆಗಳ ಭರ್ತಿ
Chikballapur District Court Recruitment 2022: ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಚಿಕ್ಕಬಳ್ಳಾಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕ |
ಹುದ್ದೆಗಳ ಹೆಸರು: | ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹಾಗೂ ಜವಾನ |
ಒಟ್ಟು ಹುದ್ದೆಗಳು | 34 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ಹುದ್ದೆಗಳ ವಿವರ
ಶೀಘ್ರಲಿಪಿಗಾರರು ಗ್ರೇಡ್ 3 – 06
ವೇತನ: 27650-52650
ಶೈಕ್ಷಣಿಕ ಅರ್ಹತೆ : ಶೀಘ್ರಲಿಪಿಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ 3 ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ದರ್ಜೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳ ಬೆರಳಚ್ಚು & ಶೀಘ್ರಲಿಪಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಬೆರಳಚ್ಚುಗಾರರು – 01
ವೇತನ: 21400-42000
ಶೈಕ್ಷಣಿಕ ಅರ್ಹತೆ: ಬೆರಳಚ್ಚುಗಾರ ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ 3 ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ದರ್ಜೆ ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಬೆರಳಚ್ಚು ನಕಲುಗಾರರು – 02
ವೇತನ: 21400-42000
ಶೈಕ್ಷಣಿಕ ಅರ್ಹತೆ: ಬೆರಳಚ್ಚುಗಾರ ನಕಲುಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ 3 ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಕಿರಿಯ ದರ್ಜೆ ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಆದೇಶ ಜಾರಿಕಾರರು – 01
ವೇತನ: 19950-37900
ಶೈಕ್ಷಣಿಕ ಅರ್ಹತೆ: ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಲಘು/ ಭಾರಿ ವಾಹನ ಚಾಲನಾ ಪರವಾನಗಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಜವಾನ – 24
ವೇತನ:17000-28950
ಶೈಕ್ಷಣಿಕ ಅರ್ಹತೆ: ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಪ.ಜಾತಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಅರ್ಜಿ ಶುಲ್ಕ:
• ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 200
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100
• ಪ.ಜಾತಿ, ಪ.ಪಂ, ಪ್ರವರ್ಗ 1ರ ಅಭ್ಯರ್ಥಿಗಳು ರೂ. 100
• ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
(ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ:
• ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಶೇಕಡಾವಾರು ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
• ಆದೇಶ ಜಾರಿಕಾರ, ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಜುಲೈ 29, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಆಗಸ್ಟ್ 27, 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |