Chikkamagaluru District Court Recruitment 2022: ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ಚಿಕ್ಕಮಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕ |
ಹುದ್ದೆಗಳ ಹೆಸರು: | ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹಾಗೂ ಸೇವಕರು |
ಒಟ್ಟು ಹುದ್ದೆಗಳು | ಒಟ್ಟು 20 ಹುದ್ದೆಗಳ ಭರ್ತಿ |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಬೆರಳಚ್ಚುಗಾರ ಹುದ್ದೆಗೆ ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢದರ್ಜೆ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಬೆರಳಚ್ಚು ನಕಲುಗಾರ ಹುದ್ದೆಗೆ ದ್ವಿತೀಯ ಪಿಯುಸಿ ಅಥವಾ ಮೂರು ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
ಸೇವಕರು ಹುದ್ದೆಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಜೊತೆಗೆ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ವೇತನಶ್ರೇಣಿ:
ಬೆರಳಚ್ಚುಗಾರರು 21,400-42,000
ಬೆರಳಚ್ಚು ನಕಲುಗಾರರು 21,400-42,000
ಸೇವಕರು 17,000-28,950
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 300
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 150
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಆಯ್ಕೆ ವಿಧಾನ:
• ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
• ಸೇವಕರು ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಆಗಸ್ಟ್ 16, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಸೆಪ್ಟೆಂಬರ್ 15, 2022 |
ಶುಲ್ಕ ಪಾವತಿಸಲು ಕೊನೆಯ ದಿನಾಂಕ | ಸೆಪ್ಟೆಂಬರ್ 17, 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾವಾರು ಉದ್ಯೋಗಗಳು |