ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ 2022

ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿ

Chitradurga District Court Recruitment 2022: ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಹೆಸರು: ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹಾಗೂ ಜವಾನ
ಒಟ್ಟು ಹುದ್ದೆಗಳು  33
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ಶೀಘ್ರಲಿಪಿಗಾರರು ಗ್ರೇಡ್ 3 1 ಹುದ್ದೆ
ವೇತನಶ್ರೇಣಿ: 27650-52650
ಶೈಕ್ಷಣಿಕ ಅರ್ಹತೆ : ಶೀಘ್ರಲಿಪಿಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಹಾಗೂ ಕನ್ನಡ ಹಾಗೂ ಆಂಗ್ಲ ಶೀಘ್ರಲಿಪಿ ಪ್ರೌಢ ದರ್ಜೆ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಅಥವಾ
ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪ್ರೌಢದರ್ಜೆ ಹಾಗೂ ಶೀಘ್ರಲಿಪಿ ಪ್ರೌಢದರ್ಜೆ ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಬೆರಳಚ್ಚುಗಾರರು 1 ಹುದ್ದೆ
ವೇತನಶ್ರೇಣಿ: 21400-42000
ಶೈಕ್ಷಣಿಕ ಅರ್ಹತೆ: ಬೆರಳಚ್ಚುಗಾರ ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಅಥವಾ
ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಪ್ರೌಢದರ್ಜೆ ಬೆರಳಚ್ಚು ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಬೆರಳಚ್ಚು ನಕಲುಗಾರರು 2 ಹುದ್ದೆಗಳು
ವೇತನಶ್ರೇಣಿ: 21400-42000
ಶೈಕ್ಷಣಿಕ ಅರ್ಹತೆ: ಬೆರಳಚ್ಚುಗಾರ ನಕಲುಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆಗಳಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು

ಅಥವಾ
ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಕಿರಿಯ ಬೆರಳಚ್ಚು ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆದೇಶ ಜಾರಿಕಾರರು 2 ಹುದ್ದೆಗಳು
ವೇತನಶ್ರೇಣಿ: 19950-37900
ಶೈಕ್ಷಣಿಕ ಅರ್ಹತೆ: ಆದೇಶ ಜಾರಿಕಾರ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಭಾಷೆ ಓದಲು, ಬರೆಯಲು ಬರಬೇಕು. ಲಘು ವಾಹನ ಚಾಲನಾ ಪರವಾನಗಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ಜವಾನ 27 ಹುದ್ದೆಗಳು
ವೇತನಶ್ರೇಣಿ: 17000-28950
ಶೈಕ್ಷಣಿಕ ಅರ್ಹತೆ: ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಭಾಷೆ ಓದಲು, ಬರೆಯಲು ಬರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಪ.ಜಾತಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 300
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 150
ಪ.ಜಾತಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.)

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಜುಲೈ 15, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಆಗಸ್ಟ್ 18, 2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
error: Content is protected !!