ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

SSLC ಪಾಸಾದವರಿಗೆ ಗ್ರಾಮ ಪಂಚಾಯಿತಿ ನೇರ ನೇಮಕಾತಿ 2022 | Gram Panchayat Recruitment 2022

ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯಿತಿ ನೇಮಕಾತಿ 2022

Chitradurga Gram Panchayat Recruitment 2022: ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಜಿಲ್ಲೆಯ ಗ್ರಾಮ ಪಂಚಾಯ್ತಿ
ಹುದ್ದೆಗಳ ಹೆಸರು:ಗ್ರಂಥಾಲಯ ಮೇಲ್ವಿಚಾರಕರು
ಒಟ್ಟು ಹುದ್ದೆಗಳು ತಿಳಿಸಿಲ್ಲ 
ಅರ್ಜಿ ಸಲ್ಲಿಸುವ ಬಗೆ ಆಫ್ ಲೈನ್ 

 

ವಿದ್ಯಾರ್ಹತೆ:
ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯ್ತಿ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಾನ ಪೂರೈಸಿರಬೇಕು ಹಾಗೂ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ,
3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವಧನ ರೂ. 12,000 ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ

ಅರ್ಜಿ ಸಲ್ಲಿಸುವ ವಿಳಾಸ :
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಹುದ್ದೆ ಖಾಲಿಯಿರುವ ಆಯಾ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಅಥವಾ ಕಾರ್ಯದರ್ಶಿಗಳಿಗೆ ಸಲ್ಲಿಸಬೇಕು.

ಕರ್ತವ್ಯ ಸ್ಥಳ:
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಬಿ-ದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ತಣಿಗೆಹಳ್ಳಿ, ಚಳ್ಳಕೆರೆ ತಾಲೂಕಿನ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಹುದ್ದೆ ಖಾಲಿ ಇದೆ.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಜೂನ್ 10, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 04, 2022
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

close button