ಕಾಫಿ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ 2022 | Coffee Board Recruitment 2022

ಕಾಫಿ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ 2022

Coffee Board Recruitment 2022: ಕಾಫಿ ಬೋರ್ಡ್ ಆಫ್ ಇಂಡಿಯಾ ತನ್ನ ಅಧಿಕೃತ ಅಧಿಸೂಚನೆಯ ಮೂಲಕ ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು: ಕಾಫಿ ಬೋರ್ಡ್ ಆಫ್ ಇಂಡಿಯಾ
ಹುದ್ದೆಗಳ ಹೆಸರು: ತಾಂತ್ರಿಕ ಸಹಾಯಕ
ಒಟ್ಟು ಹುದ್ದೆಗಳು  2
ಅರ್ಜಿ ಸಲ್ಲಿಸುವ ಬಗೆ  ಆಫ್ಲೈನ್ 

 

ವಿದ್ಯಾರ್ಹತೆ:
ಕಾಫಿ ಬೋರ್ಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಬೋರ್ಡ್‌ಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಯೋಕೆಮಿಸ್ಟ್ರಿ,ಕೆಮಿಸ್ಟ್ರಿ, ಅನಾಲಿಟಿಕಲ್ ಇನ್‌ಸ್ಟ್ರುಮೆಂಟೇಶನ್‌ನಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

 

 

ವಯೋಮಿತಿ:
ಕಾಫಿ ಬೋರ್ಡ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 23-04-2022 ರಂತೆ 35 ವರ್ಷಗಳು.
(ಭಾರತೀಯ ಕಾಫಿ ಮಂಡಳಿಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ)

ವೇತನಶ್ರೇಣಿ:
ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ.20,000/- ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ 
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, cqd.coffeeboard@gmail.com ಗೆ 23-04-2022 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  31-03-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  23-04-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

 

error: Content is protected !!