ಸಂಬಳ: 51,550/- ಕೋರ್ಟ್ ನಲ್ಲಿ ಉದ್ಯೋಗಾವಕಾಶ: ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಉಚ್ಚ ನ್ಯಾಯಲಯದಲ್ಲಿ ಖಾಲಿ ಇರುವ ಒಟ್ಟು 21 ಜಿಲ್ಲಾ ನ್ಯಾಯಾಧೀಶ ಹುದ್ದೆಗಳನ್ನು ನೇಮಕಾತಿ ಮಾಡಿಕೋಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನಿಗದಿಪಡಿಸಿದ ಕೊನೆಯ ದಿನಾಂಕ : 09-12-2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಲು ಸೂಚಿಸಿದೆ.

ಒಟ್ಟು ಹುದ್ದೆಗಳು: 21
ಉದ್ಯೋಗ ಸ್ಥಳ: ಕರ್ನಾಟಕ

ವಿದ್ಯಾರ್ಹತೆ: ಕರ್ನಾಟಕ ಉಚ್ಚ ನ್ಯಾಯಲಯ ನೇಮಕಾತಿಯ ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಕಾನೂನು ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ: ಕರ್ನಾಟಕ ಉಚ್ಚ ನ್ಯಾಯಲಯ ನೇಮಕಾತಿಯ ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮತ್ತು ಪ.ಜಾತಿ/ಪ.ಪಂಗಡದ ಗರಿಷ್ಟ 48 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಮಾಜಿ ಸೈನಿಕ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ: ಕರ್ನಾಟಕ ಉಚ್ಚ ನ್ಯಾಯಲಯ ನೇಮಕಾತಿಯ ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 51,550/- ರಿಂದ 63,070/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ: ಕರ್ನಾಟಕ ಉಚ್ಚ ನ್ಯಾಯಲಯ ನೇಮಕಾತಿಯ ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪ್ರಿಲಿಮಿನರಿ ಪರೀಕ್ಷೆಗೆ ಸಾಮಾನ್ಯ ಅಭ್ಯರ್ಥಿಗಳು 500/-ರೂ ಮತ್ತು ಪ.ಜಾ/ಪ.ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಪ್ರಮುಖ ಪರೀಕ್ಷೆಗೆ ತರೆ ಅಭ್ಯರ್ಥಿಗಳು 1000/-ರೂ ಮತ್ತು ಪ.ಜಾ/ಪ.ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಅಥವಾ ಚಲನ್ ಮೂಲಕ ಡಿಸೆಂಬರ್ 14,2021ರ ರಾತ್ರಿ 11:59ರೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ: ಕರ್ನಾಟಕ ಉಚ್ಚ ನ್ಯಾಯಲಯ ನೇಮಕಾತಿಯ ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://karnatakajudiciary.kar.nic.in/Index.asp ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅರ್ಜಿ ಶುಲ್ಕ ಪಾವತಿಸುವ ಮೂಲಕ ಡಿಸೆಂಬರ್ 9,2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಆಯ್ಕೆ ಪ್ರಕ್ರಿಯೆ: ಕರ್ನಾಟಕ ಉಚ್ಚ ನ್ಯಾಯಲಯ ನೇಮಕಾತಿಯ ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10 ನವೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 9 ಡಿಸೆಂಬರ್ 2021
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 14 ಡಿಸೆಂಬರ್ 2021

Website 
Notification PDF
Apply Online

Karnataka High Court Recruitment 2021 – Apply Online for 21 District Judges Posts

error: Content is protected !!