ಜಿಲ್ಲಾ ನ್ಯಾಯಾಲಯಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 2021

ತುಮಕೂರು ‌ನ್ಯಾಯಾಂಗ ಇಲಾಖೆಯಲ್ಲಿನ ವಿವಿಧ ಹುದ್ದೆಗಳಾದ ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಜಾರಿ ಪೇದೆ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ, ಕೋವಿಡ್ ಕಾರಣದಿಂದಾಗಿ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತವಾಗಿತ್ತು, ಸದ್ಯ ಈಗ ಪುನಃ ನೇಮಕಾತಿ ಆರಂಭಿಸಲಾಗಿದೆ.
ಸದರಿ ಹುದ್ದೆಗಳಿಗೆ ಈಗಾಗಲೇ ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ, ಶುಲ್ಕವನ್ನು ಪಾವತಿ ಮಾಡುವ ಅಗತ್ಯವಿಲ್ಲ. ಮೊದಲು ಸಲ್ಲಿಸಿರುವ ಅರ್ಜಿ, ಶುಲ್ಕವನ್ನೇ ಪರಿಗಣಿಸಲಾಗುತ್ತದೆ ಎಂದು ಹೇಳಲಾಗಿದೆ.ಸದರಿ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಇದೇ ಮಾರ್ಚ್ 24, 2021 ಕೊನೆಯ ದಿನವಾಗಿದೆ.

ಹುದ್ದೆಗಳ ವಿವರ

1) ಬೆರಳಚ್ಚುಗಾರ 7

2) ಬೆರಳಚ್ಚು ನಕಲುಗಾರ 3

3) ಜಾರಿಕಾರ 11

ವಿದ್ಯಾರ್ಹತೆ
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಜೊತೆಗೆ ಕನ್ನಡ ಮತ್ತು ಆಂಗ್ಲ ಭಾಷೆ ಪ್ರೌಢ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಜಾರಿಕಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ನಿಗದಿ ಮಾಡಿರಬೇಕು. ಜೊತೆಹೆ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.


ವಯೋಮಿತಿ
ಸರಕಾರದ ನಿಯಮಾನುಸಾರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 35 ವರ್ಷ ದಾಟಿರಬಾರದು. ಸದರಿ ಹುದ್ದೆಗಳಿಗೆ ನಿಯಮಾನುಸಾರ ಜಾತಿವಾರು ಮೀಸಲಾತಿ ಅನ್ವಯವಾಗುತ್ತದೆ.

ಅರ್ಜಿ ಶುಲ್ಕ
ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 200 ರೂ., ಹಾಗೂ ಪ.ಜಾತಿ/ ಪ.ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ. 100 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ 23-02-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24-03-2021
ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಲು ಕೊನೆಯ ದಿನ 18-04-2021
ಚಲನ್ ಮೂಲಕ ಪಾವತಿಸಲು ಕೊನೆಯ ದಿನ 21-04-2021

ಅಧಿಸೂಚನೆ 

error: Content is protected !!