ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಎಸ್ಸೆಸೆಲ್ಸಿ ಪಾಸಾದವರಿಗೆ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಜವಾನ ಹುದ್ದೆಗಳಿಗೆ ಅರ್ಜಿ ಅಹ್ವಾನ

ಉದ್ಯೋಗ ಸುದ್ದಿ 

ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ಮಂಗಳೂರು ಇಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇಮಕಾತಿಗಾಗಿ ಹತ್ತನೇ ತರಗತಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 25-05-2021 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶನೀಡಲಾಗಿದೆ.
ಒಟ್ಟು ಹುದ್ದೆಗಳು: 34
ಉದ್ಯೋಗ ಸ್ಥಳ: ದಕ್ಷಿಣ ಕನ್ನಡ (ಮಂಗಳೂರು)

ವಿದ್ಯಾರ್ಹತೆ:
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು.

ವಯೋಮಿತಿ:
ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸನ್ನು ಹೊಂದಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು.
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಗಳಿಗೆ ಸೇರಿದ ಅಭ್ಯರ್ಥಿಗಳು ಗರಿಷ್ಠ 38 ವರ್ಷ ವಯಸ್ಸನ್ನು ಮೀರಿರಬಾರದು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ 1ರ ಹಿಂದುಳಿದ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯಸ್ಸನ್ನು ಮೀರಿರಬಾರದು.

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಗಳಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 200/-
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ, ಪ್ರವರ್ಗ-1ರ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ವೇತನ ಶ್ರೇಣಿ : 17000-400-18600-450-20400-500-22400-550-24600-600-27000-650-28950

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಕಿರುಪಟ್ಟಿ ತಯಾರಿಸಿ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21 ಎಪ್ರಿಲ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25 ಮೇ 2021

Website
Notification

close button