ದಾವಣಗೆರೆ ನ್ಯಾಯಾಲಯಗಳಲ್ಲಿ ಜವಾನ, ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Davanagere Court Recruitment 2022: ದಾವಣಗೆರೆ ಜಿಲ್ಲಾ ನ್ಯಾಯಾಂಗ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಟೈಪಿಸ್ಟ್, ಜವಾನರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು: | ದಾವಣಗೆರೆ ಜಿಲ್ಲಾ ನ್ಯಾಯಾಂಗ ಘಟಕ |
ಹುದ್ದೆಗಳ ಹೆಸರು: | ಟೈಪಿಸ್ಟ್, ಜವಾನರ ಹುದ್ದೆಗಳನ್ನು ಭರ್ತಿ |
ಒಟ್ಟು ಹುದ್ದೆಗಳು | 29 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಬೆರಳಚ್ಚುಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪಾಸ್ ಅಥವಾ 3 ವರ್ಷಗಳ ಡಿಪ್ಲೊಮ ಕಮರ್ಸಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ
ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ
ಡಿಪ್ಲೊಮ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ.
ಜವಾನ ಹುದ್ದೆಗೆ ವಿದ್ಯಾರ್ಹತೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ. ಕನ್ನಡ ಓದಲು ಮತ್ತು ಬರೆಯಲು ಬರಬೇಕು.
ವಯೋಮಿತಿ:
ಕನಿಷ್ಠ 18 ವರ್ಷ ಆಗಿರಬೇಕು.
ಗರಿಷ್ಠ ವಯೋಮಿತಿ ಜಾತಿವಾರು ಕೆಳಗಿನಂತಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ.
ವೇತನಶ್ರೇಣಿ:
ಮಾಸಿಕ ವೇತನ ವಿವರ
ಬೆರಳಚ್ಚುಗಾರರು: ರೂ.21400-42000.
ಜವಾನ : ರೂ.17000-28950.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.200.
2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.100.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 14-04-2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 17-05-2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಜವಾನ ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಬೆರಳಚ್ಚು ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |