ದಾವಣಗೆರೆ ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ 2022
Davanagere District Court Recruitment 2022: ದಾವಣಗೆರೆ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,
ಇಲಾಖೆ ಹೆಸರು: | ದಾವಣಗೆರೆ ಜಿಲ್ಲಾ ನ್ಯಾಯಾಲಯ |
ಹುದ್ದೆಗಳ ಹೆಸರು: | ವಿವಿಧ ಹುದ್ದೆಗಳು |
ಒಟ್ಟು ಹುದ್ದೆಗಳು | 31 |
ಅರ್ಜಿ ಸಲ್ಲಿಸುವ ಬಗೆ | ಆನ್ಲೈನ್ |
ವಿದ್ಯಾರ್ಹತೆ:
ಬೆರಳಚ್ಚುಗಾರ ಹುದ್ದೆಗೆಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್ ವಿದ್ಯಾರ್ಹತೆ ಅಥವಾ ತತ್ಸಮಾನ ವಿದ್ಯಾರ್ಹತೆ ಉತ್ತೀರ್ಣರಾಗಿರಬೇಕು. ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಮಾಧ್ಯಮದ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಬೆರಳಚ್ಚು ನಕಲುಗಾರ ಹುದ್ದೆಗೆಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟಿಸ್ ವಿದ್ಯಾರ್ಹತೆ ಅಥವಾ ತತ್ಸಮಾನ ವಿದ್ಯಾರ್ಹತೆ ಉತ್ತೀರ್ಣರಾಗಿರಬೇಕು ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಮಾಧ್ಯಮದ ಬೆರಳಚ್ಚು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಜವಾನ ಹುದ್ದೆಗೆಳಿಗೆ ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಕನ್ನಡ ಭಾಷೆಯನ್ನು ಓದುವ ಮತ್ತು ಬರೆಯುವ ಸಾಮರ್ಥ್ಯ ಹೊಂದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 200
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ
ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು
ಜವಾನ ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು
ಪ್ರಮುಖ ದಿನಾಂಕಗಳು |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | ಏಪ್ರಿಲ್ 18, 2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಮೇ 17, 2022 |
ಶುಲ್ಕ ಪಾವತಿಸಲು ಕೊನೆಯ ದಿನಾಂಕ | ಮೇ 19, 2022 |
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಬೆರಳಚ್ಚುಗಾರ (ನೋಟಿಫಿಕೇಶನ್) | ಇಲ್ಲಿ ಕ್ಲಿಕ್ ಮಾಡಿ |
ಬೆರಳಚ್ಚು ನಕಲುಗಾರ (ನೋಟಿಫಿಕೇಶನ್) | ಇಲ್ಲಿ ಕ್ಲಿಕ್ ಮಾಡಿ |
ಜವಾನ (ನೋಟಿಫಿಕೇಶನ್) | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |