ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಡಿಸಿಸಿ ಬ್ಯಾಂಕ್ ಹೊಸ ನೇಮಕಾತಿ 2022 | DCC Bank Recruitment 2022

ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ನೇಮಕಾತಿ 2022

Davangere DCC Bank Recruitment 2022: ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ, ದಾವಣಗೆರೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

ಇಲಾಖೆ ಹೆಸರು:ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ,
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 48
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ವಿವರ 
ಕಿರಿಯ ಸಹಾಯಕರು 29 ಹುದ್ದೆಗಳು 
ವೇತನಶ್ರೇಣಿ ರೂ.30350-58250
ಕಂಪ್ಯೂಟರ್ ಇಂಜಿನಿಯರ್ 1 ಹುದ್ದೆ
ವೇತನಶ್ರೇಣಿ ರೂ. 33450-62600
ಕಂಪ್ಯೂಟರ್ ಇಂಜಿನಿಯರ್ 1 ಹುದ್ದೆ
ವೇತನಶ್ರೇಣಿ ರೂ. 33450-62600
ಕಂಪ್ಯೂಟರ್ ಆಪರೇಟರ್ 1 ಹುದ್ದೆ
ವೇತನಶ್ರೇಣಿ ರೂ.30350-58250
ವಾಹನ ಚಾಲಕರು 1 ಹುದ್ದೆಗಳು 
ವೇತನಶ್ರೇಣಿ ರೂ. 27650-52650
ಕಿರಿಯ ಸೇವಕರು 16 ಹುದ್ದೆಗಳು 
ವೇತನಶ್ರೇಣಿ ರೂ.23500-47650

 

 

ವಿದ್ಯಾರ್ಹತೆ:
ಕಿರಿಯ ಸಹಾಯಕರು – ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಹಾಗೂ ಸಹಕಾರ ವಿಷಯದಲ್ಲಿ ಅಧ್ಯಯನ, ಜ್ಞಾನ ಮತ್ತು ಅನುಭವ ಪಡೆದವರಿಗೆ ಆದ್ಯತೆ ನೀಡಲಾಗುವುದು.

ಕಂಪ್ಯೂಟರ್ ಇಂಜಿನಿಯರ್ – ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಪ್ರೊಗ್ರಾಮರ್, ಬಿ.ಇ. ಸಿ.ಎಸ್., ಇ&ಸಿ, ಇ&ಇ ಇಂಜಿನಿಯರಿಂಗ್/ ಎಂ.ಸಿ.ಎ ಪದವಿಯಲ್ಲಿ ತೇರ್ಗಡೆಯಾಗಿರಬೇಕು .

ಕಂಪ್ಯೂಟರ್ ಆಪರೇಟರ್ –  ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷದ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ತೇರ್ಗಡೆಯಾಗಿರಬೇಕು .

ವಾಹನ ಚಾಲಕರು –  ಹುದ್ದೆಗಳಿಗೆ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ/ ಎಸ್.ಎಸ್.ಎಲ್.ಸಿ ಯಲ್ಲಿ ತೇರ್ಗಡೆಯಾಗಿರಬೇಕು ಹಾಗೂ ಊರ್ಜಿತ ಲಘು ವಾಹನ ಚಾಲನೆಯ ಲೈಸೆನ್ಸ್, ಬ್ಯಾಡ್ಜ್ ಹೊಂದಿರತಕ್ಕದ್ದು.

ಕಿರಿಯ ಸೇವಕರು (ಅಟೆಂಡರ್) –  ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
 ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ,
ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ,
ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

 

 

ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ. 1000 ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1ರ ಅಭ್ಯರ್ಥಿಗಳು ರೂ. 500 ಶುಲ್ಕ ಪಾವತಿಸಬೇಕು.
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು)

ಆಯ್ಕೆ ವಿಧಾನ 
ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಸರಾಸರಿ ಅಂಕಗಳನ್ನು ಶೇ. 85% ಕ್ಕೆ ಇಳಿಸಿ, ಪ್ರಾಪ್ತವಾಗುವ ಅಂಕಗಳ ಜೊತೆಗೆ ಸಂದರ್ಶನದಲ್ಲಿ ಗಳಿಸಿದ ಅಂಕಗಳನ್ನು ಕೂಡಿಸಿ ಅರ್ಹತಾ ಪಟ್ಟಿಯನ್ನು ತಯಾರಿಸಿ, ಮೀಸಲಾತಿ ನಿಯಮಗಳನ್ನು ಅನುಸರಿಸಿ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ನೇಮಕಾತಿ ಮಾಡಿಕೊಳ್ಳಲಾಗುವುದು.

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮೇ 02, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 01, 2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

 

close button