ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

FDA ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ:

Davangere University Recruitment 2022: ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಲಭ್ಯವಿರುವ ಕಲ್ಯಾಣ ಕರ್ನಾಟಕ ವೃಂದದ ಹಾಗೂ ಸ್ಥಳೀಯ ವೃಂದದ ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ದಾವಣಗೆರೆ ವಿಶ್ವವಿದ್ಯಾನಿಲಯ
ಹುದ್ದೆಗಳ ಹೆಸರು:ವಿವಿಧ ಹುದ್ದೆಗಳು 
ಒಟ್ಟು ಹುದ್ದೆಗಳು 10
ಅರ್ಜಿ ಸಲ್ಲಿಸುವ ಬಗೆ ಆಫ್ ಲೈನ್ 
ಹುದ್ದೆಗಳ ವಿವರ 
ಸಹಾಯಕ ಕುಲಸಚಿವ 2 ಹುದ್ದೆಗಳು
ಕಚೇರಿ ಅಧೀಕ್ಷಕ 2 ಹುದ್ದೆಗಳು
ಪ್ರಥಮ ದರ್ಜೆ ಸಹಾಯಕ 6 ಹುದ್ದೆಗಳು

ವಿದ್ಯಾರ್ಹತೆ:
ಹುದ್ದೆಗಳಿಗನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಿದ್ದು, ಈ ಕುರಿತ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ಗಳ ಮೂಲಕ ಅಧಿಸೂಚನೆಯನ್ನು ಗಮನಿಸತಕ್ಕದ್ದು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು. ಹಾಗೂ ಗರಿಷ್ಠ ವಯೋಮಿತಿಯು
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿರುತ್ತದೆ.

ವೇತನಶ್ರೇಣಿ:

ಹುದ್ದೆಗಳ ಹೆಸರು ವೇತನ ಶ್ರೇಣಿ 
ಸಹಾಯಕ ಕುಲಸಚಿವ 52650- 97100 ರೂ ಮಾಸಿಕ
ಕಚೇರಿ ಅಧೀಕ್ಷಕ 43100-83900 ರೂ ಮಾಸಿಕ
ಪ್ರಥಮ ದರ್ಜೆ ಸಹಾಯಕ 30350-58250 ರೂ ಮಾಸಿಕ

ಅರ್ಜಿ ಶುಲ್ಕ:
ವಿಕಲಚೇತನ ದೃಷ್ಟಿದೋಷವುಳ್ಳ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 500 ರೂ.
ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 1000 ರೂ.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ :
ಕುಲಸಚಿವರು, ದಾವಣಗೆರೆ ವಿಶ್ವವಿದ್ಯಾಲಯ, ಶಿವಗಂಗೋತ್ರಿ, ದಾವಣಗೆರೆ-577007

  • ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
  • ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
  • ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. ಅದರ ಮಾಹಿತಿ ಅಪ್​ಲೋಡ್​ ಮಾಡಿ
  • ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 19 ಸೆಪ್ಟೆಂಬರ್​ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18 ಅಕ್ಟೋಬರ್ 2022
  

ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

close button