ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

SSLC ಪಾಸಾದವರಿಗೆ ನೋಂದಣಿ ಮತ್ತು ಮುದ್ರಾoಕ ಇಲಾಖೆ ನೇಮಕಾತಿ 2022

ನೋಂದಣಿ ಮತ್ತು ಮುದ್ರಾoಕ ಇಲಾಖೆ ನೇಮಕಾತಿ 2022

IGR Karnataka Recruitment 2022: ಕರ್ನಾಟಕ ರಾಜ್ಯ ಸರ್ಕಾರದ ನೋಂದಣಿ ಮತ್ತು ಮುದ್ರಾoಕ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್-ಡಿ (ಜವಾನರ) ಬ್ಯಾಕ್ ಲಾಗ್ ಹುದ್ದೆಯ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು:ನೋಂದಣಿ ಮತ್ತು ಮುದ್ರಾoಕ ಇಲಾಖೆ
ಹುದ್ದೆಗಳ ಹೆಸರು:ಜವಾನ
ಒಟ್ಟು ಹುದ್ದೆಗಳು 1
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 

ವಿದ್ಯಾರ್ಹತೆ:
ಕರ್ನಾಟಕ ರಾಜ್ಯ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಹಾಗೆ  ಈ ಹುದ್ದೆಗೆ ಹತ್ತನೇ ತರಗತಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ

ವಯೋಮಿತಿ:
ಅರ್ಜಿ ಆಹ್ವಾನಿಸಿ ಜಾರಿ ಮಾಡಲಾಗಿರುವ ಈ ಅಧಿಸೂಚನೆಯು ಹೊರಡಿಸಿದ ದಿನಾಂಕದವರೆಗೆ ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಮತ್ತು ಪ್ರಕಟಣೆಯಾದ ದಿನಾಂಕದೊಳಗೆ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.

 

 

ಅರ್ಜಿ ಶುಲ್ಕ:
ಕರ್ನಾಟಕ ರಾಜ್ಯ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಹಾಗೆ  ಯಾವುದೇ ರೀತಿಯ ಅರ್ಜಿ ಶುಲ್ಕವನ್ನ ಅಭ್ಯರ್ಥಿಗಳು ಪಾವತಿಸುವ ಅಗತ್ಯವಿರುವದಿಲ್ಲ

ವೇತನ:
ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಗ್ರೂಪ್ D (ಪ್ಯೂನ್) ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ₹ 17,000-28,950 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ 
ಸ್ವೀಕರಿಸಲಾದ ಅಂಚೆ ಅರ್ಜಿಗಳನ್ನು ಕ್ರೂಢೀಕರಿಸಿ, ಭರ್ತಿ ಮಾಡಿರುವ ಮಾಹಿತಿ/ವಿವರಗಳನ್ನು ನಿಯಮಾನುಸಾರ ಪರಿಶೀಲಿಸಿ, ವಿದ್ಯಾರ್ಹತೆಯಲ್ಲಿ ಗರಿಷ್ಠ ಅಂಕಗಳನ್ನು ಪಡೆದ ಅಭ್ಯರ್ಥಿಗಳನ್ನು ಪರಿಗಣಿಸಿ ಒಂದು ಜ್ಯೇಷ್ಠತಾ ಪಟ್ಟಿ ಮಾಡಿ ಮತ್ತು 29 ರಿಂದ 40 ವರ್ಷದವರೆಗೆ ವಯೋಮಿತಿವುಳ್ಳ ಅಭ್ಯರ್ಥಿಗಳಿಗೆ ಇನ್ನೊಂದು ಜ್ಯೇಷ್ಠತಾ ಪಟ್ಟಿಯನ್ನು ತಯಾರಿಸಲಾಗುವುದು ಹಾಗೂ 29 ರಿಂದ 40 ವರ್ಷದ ವಯೋಮಿತಿವುಳ್ಳ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

 

 

ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ನಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಗೆ ಅವಶ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಂಚೆ ಮೂಲಕ ಕಚೇರಿಯ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು :
ಜನ್ಮ ದಿನಾಂಕ ದೃಢೀಕರಿಸಿರುವ ಪ್ರಮಾಣ ಪತ್ರ, ಶೈಕ್ಷಣಿಕ ಪ್ರಮಾಣ ಪತ್ರ, ಜಾತಿ ದೃಢೀಕರಿಸುವ ಪ್ರಮಾಣ ಪತ್ರ, ಕನ್ನಡ ಮಾಧ್ಯಮದ ಅಭ್ಯರ್ಥಿ ಆಗಿದ್ದಲ್ಲಿ ಕನ್ನಡ ಮಾಧ್ಯಮ ದೃಢೀಕರಣ ಪತ್ರ, ಆಧಾರ್ ಕಾರ್ಡ್ ಹಾಗೂ ಇತರೆ ದಾಖಲೆಗಳು ಇದ್ದರೆ ಲಗತ್ತಿಸಬಹುದು.

ಅರ್ಜಿ ಸಲ್ಲಿಸಬೇಕಾದ ಅಂಚೆ ವಿಳಾಸ:
ನೋಂದಣಿ ಮಹಾಪರಿವೀಕ್ಷಕರು ಹಾಗೂ ಮುದ್ರಾoಕಗಳ ಆಯುಕ್ತರು, ಕಂದಾಯ ಭವನ, 8ನೇ ಮಹಡಿ, ಕೆಂಪೇಗೌಡ ರಸ್ತೆ ಬೆಂಗಳೂರು – 560009

 

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 16 ಫೆಬ್ರುವರಿ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಮಾರ್ಚ್ 2022
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ Click Here 
ಅರ್ಜಿ ಫಾರ್ಮ್ Click Here 

close button