WhatsApp Telegram Group

ಕೋರ್ಟ್ ನಲ್ಲಿ ಖಾಲಿ ಹುದ್ದೆಗಳು – SSLC ಪಾಸಾದವರಿಗೆ

ಹೊಸ ನೇಮಕಾತಿ ಅಧಿಸೂಚನೆ 2023

Dharwad District Court Recruitment 2023 : ಧಾರವಾಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಬೆರಳಚ್ಚು ನಕಲುಗಾರ ಹಾಗೂ ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – ಡೇಟಾ ಎಂಟ್ರಿ ಆಪರೇಟರ್ ಹಾಗೂ ಸಹಾಯಕ ಹುದ್ದೆಗಳು

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಧಾರವಾಡ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಬೆರಳಚ್ಚು ನಕಲುಗಾರ ಹಾಗೂ ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕ Dharwad District Court
ಹುದ್ದೆಗಳ ಹೆಸರು: ಬೆರಳಚ್ಚು ನಕಲುಗಾರರು, ಜವಾನ
ಒಟ್ಟು ಹುದ್ದೆಗಳು  ಒಟ್ಟು 33 ಹುದ್ದೆಗಳ ಭರ್ತಿ
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಬೆರಳಚ್ಚು ನಕಲುಗಾರ

ಹುದ್ದೆಗಳಿಗೆ ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ನಡೆಸುವ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿರಬೇಕು.
ಅಥವಾ
ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಕಿರಿಯ ದರ್ಜೆಯ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

In Article ad

ಜವಾನ
ಹುದ್ದೆಗಳಿಗೆ ಅಭ್ಯರ್ಥಿಗಳು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಭಾಷೆ ಓದಲು, ಬರೆಯಲು ಬರಬೇಕು. ಲಘು ವಾಹನ ಚಾಲನಾ ಲೈಸೆನ್ಸ್ ಐಚ್ಛಿಕ (Optional)

ಉದ್ಯೋಗ ಸುದ್ದಿ – ತೆರಿಗೆ ಸಹಾಯಕ ಇನ್ಸ್ಪೆಕ್ಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ – SSLC ಪಾಸಾದವರಿಗೆ

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ವೇತನಶ್ರೇಣಿ:
ಜಿಲ್ಲಾ ನ್ಯಾಯಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ.21400/- ರೂ.42000/- ನಿಗದಿಮಾಡಲಾಗದೆ 

In Article ad

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಪ್ರವರ್ಗ 1, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 200
ಎಸ್ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳು ರೂ. 100
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:
ಬೆರಳಚ್ಚು ನಕಲುಗಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಜವಾನ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1:10ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು‌.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಫೆಬ್ರವರಿ 01, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಮಾರ್ಚ್ 01, 2023
   

In Article ad
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button