ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2022
DHFWS Haveri Recruitment 2022: ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಅಗತ್ಯವಿರುವ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 13ರಂದು ಬೆಳಗ್ಗೆ 10.30ಕ್ಕೆ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ haveri.nic.in ಗೆ ಭೇಟಿ ನೀಡಬಹುದು.
ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ- ಹಾವೇರಿ
ಹುದ್ದೆಯ ಹೆಸರು: ಮೆಡಿಕಲ್ ಆಕ್ಸಿಜನ್ ಟೆಕ್ನಿಷಿಯನ್ಸ್
ಒಟ್ಟು ಹುದ್ದೆಗಳು: 15
ಉದ್ಯೋಗದ ಸ್ಥಳ: ಹಾವೇರಿ
ಶೈಕ್ಷಣಿಕ ಅರ್ಹತೆ:
DHFWS ಹಾವೇರಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ/ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಬಯೋ-ಮೆಡಿಕಲ್/ ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್/ ಇನ್‌ಸ್ಟ್ರುಮೆಂಟೇಶನ್/ ಮೆಕ್ಯಾನಿಕಲ್/ ಇನ್‌ಸ್ಟ್ರುಮೆಂಟ್ ಮೆಕ್ಯಾನಿಕ್/ ಮೇಂಟೆನೆನ್ಸ್ ಮೆಕ್ಯಾನಿಕ್‌ನಲ್ಲಿ ಡಿಪ್ಲೊಮಾ, ITI ಪೂರ್ಣಗೊಳಿಸಿರಬೇಕು.
ಕಾರ್ಯಾನುಭವ:
ಅಭ್ಯರ್ಥಿಗಳು ಆಸ್ಪತ್ರೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು ಅಥವಾ ವೈದ್ಯಕೀಯ ಸಲಕರಣೆ/ವೈದ್ಯಕೀಯ ಆಕ್ಸಿಜನ್ ಪ್ಲಾಂಟ್ ಸೇವೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ವಿಮ್ಸ್ ನಲ್ಲಿ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ
ವಯೋಮಿತಿ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಹಾವೇರಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು DHFWS ಹಾವೇರಿ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.
ವಯೋಸಡಿಲಿಕೆ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಹಾವೇರಿ ನಿಯಮಾವಳಿ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ ಶ್ರೇಣಿ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 15,000 ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ಸಂದರ್ಶನ
ಸಂದರ್ಶನ ನಡೆಯುವ ಸ್ಥಳ:
ತಾಲೂಕು ಆರೋಗ್ಯ ಭವನ ತಾಲೂಕು ವೈದ್ಯಾಧಿಕಾರಿಗಳ ಕಚೇರಿ ಪಿ.ಬಿ.ರಸ್ತೆ ಹಾವೇರಿ ಕರ್ನಾಟಕ
SSLC ಪಾಸಾದವರಿಗೆ ಗ್ರಂಥಾಲಯದಲ್ಲಿ ಖಾಲಿ ಹುದ್ದೆಗಳು
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/12/2021
ಸಂದರ್ಶನ ನಡೆಯುವ ದಿನಾಂಕ: 13/01/2022
OFFICIAL WEBSITE |
DOWNLOAD NOTIFICATION PDF |