3006 ಸಿಹೆಚ್‌ಒ ಹುದ್ದೆಗಳಿಗೆ ಅರ್ಜಿ ಅಹ್ವಾನ । DHFWS Karnataka Recruitment 2021

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಮುದಾಯ ಆರೋಗ್ಯ ಅಧಿಕಾರಿ (ಸಿಹೆಚ್‌ಒ) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ 9 ದಿನಗಳು ಬಾಕಿ ಇವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಸಿಹೆಚ್‌ಒ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ.

ಹುದ್ದೆಯ ಹೆಸರು : ಸಮುದಾಯ ಆರೋಗ್ಯ ಅಧಿಕಾರಿಗಳು(ಸಿಹೆಚ್‌ಒ)
ಹುದ್ದೆಯ ಸಂಖ್ಯೆ : 3006

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ ನರ್ಸಿಂಗ್ / ಪೋಸ್ಟ್‌ ಬಿಎಸ್ಸಿ ನರ್ಸಿಂಗ್ ಜತೆಗೆ ರಾಜ್ಯ ನರ್ಸಿಂಗ್ ಕೌನ್ಸಿಲ್‌ ಕೆಎನ್‌ಸಿ/ಐಎನ್‌ಸಿ ಅಲ್ಲಿ ನೋಂದಣಿ ಪಡೆದಿರಬೇಕು.

ಮಾಸಿಕ ವೇತನ : ರೂ.22,000 ಜತೆಗೆ ರೂ.8000 ವರೆಗೆ ಪ್ರೋತ್ಸಾಹಧನ ನೀಡಲಾಗುತ್ತದೆ. ಹೆಚ್ಚಿನ ಆಧ್ಯತೆಯುಳ್ಳ ಜಿಲ್ಲೆಗಳಲ್ಲಿ ಈ ಹುದ್ದೆಗೆ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಮಾಸಿಕ ರೂ.24,200 ನೀಡಲಾಗುತ್ತದೆ.

ನೇಮಕ ಮಾಡುವ ಜಿಲ್ಲೆಗಳು
ವಿಜಯಪುರ, ಬಾಗಲಕೋಟೆ, ಕೊಪ್ಪಳ, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಗಳಿಗೆ (ಹೆಚ್ಚಿನ ಆಧ್ಯತೆ ಜಿಲ್ಲೆಗಳು), ಬೀದರ್, ಬಳ್ಳಾರಿ, ಕಲಬುರ್ಗಿ, ರಾಯಚೂರು, ಚಿಕ್ಕಮಗಳೂರು, ಹಾವೇರಿ, ಕೋಲಾರ, ಬೆಳಗಾವಿ, ತುಮಕೂರು, ಮೈಸೂರು, ದಕ್ಷಿಣ ಕನ್ನಡ, ಮಂಡ್ಯ, ಉಡುಪಿ, ಚಿಕ್ಕಬಳ್ಳಾಪುರ, ಕೊಡಗು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಈ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ.

ವಯೋಮಿತಿ:
ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 40 ವರ್ಷ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 27-09-2021
ಅನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 18-10-2021 ರ ಸಂಜೆ 5 ಗಂಟೆವರೆಗೆ.
ಲಿಖಿತ ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆ ದಿನಾಂಕ: 23-10-2021
ಮೂಲ ದಾಖಲೆಗಳ ಪರಿಶೀಲನೆ ಪ್ರಾರಂಭ ದಿನಾಂಕ: 26-10-2021

Apply Online
Notification

DHFWS Karnataka Recruitment 2021 – Apply Online for 3006 Community Health Officer Posts

error: Content is protected !!